ಬೀಜಿಂಗ್: ಕಳೆದ ಕೆಲವು ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದ ಕೋವಿಡ್ 19 ಸೋಂಕು ಪ್ರಕರಣ ಮತ್ತೆ ಪ್ರಪಂಚದ ಹಲವೆಡೆ ಹೆಚ್ಚಳವಾಗಲು ಆರಂಭವಾಗಿದೆ. ಚೀನಾದ ಅತಿದೊಡ್ಡ ನಗರಗಳಲ್ಲಿ ಒಂದಾದ ಶಾಂಘೈಯಲ್ಲಿ ಸೋಮವಾರದಿಂದ (ಮಾರ್ಚ್ 28) ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಇದನ್ನೂ ಓದಿ:ಕಪಾಳ ಮೋಕ್ಷ: ಕ್ರಿಸ್ ರಾಕ್ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ವಿಲ್ ಸ್ಮಿತ್
ಫ್ರಾನ್ಸ್ ನಲ್ಲಿ ಕಳೆದ 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, 467ರಿಂದ 21,073ಕ್ಕೆ ಪ್ರಕರಣ ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.
ಇಟಲಿಯಲ್ಲಿ ಸೋಮವಾರ 30,710 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. 95 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕಳೆದ ಶುಕ್ರವಾರ ಇಟಲಿಯಲ್ಲಿ 75,616 ಕೋವಿಡ್ ಪ್ರಕರಣ ವರದಿಯಾಗಿದ್ದು, ಗುರುವಾರ 81,811 ಕೋವಿಡ್ ಪ್ರಕರಣ ಪತ್ತೆಯಾಗಿತ್ತು ಎಂದು ವರದಿ ತಿಳಿಸಿದೆ.
ಚೀನಾದ ಶಾಂಘೈನಲ್ಲಿ ಎರಡನೇ ದಿನವಾದ ಮಂಗಳವಾರ(ಮಾರ್ಚ್ 29)ವೂ ಕೋವಿಡ್ 19 ಲಾಕ್ ಡೌನ್ ಅನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ನಿವಾಸಿಗಳು ಅನಗತ್ಯವಾಗಿ ಹೊರಗೆ ಓಡಾಡುವುದನ್ನು ನಿರ್ಬಂಧಿಸಲಾಗಿದೆ. ವಾಣಿಜ್ಯ ನಗರಿ ಶಾಂಘೈನಲ್ಲಿ 26 ಮಿಲಿಯನ್ ಜನಸಂಖ್ಯೆ ಹೊಂದಿದೆ. ಪ್ರತಿದಿನ ಶಾಂಘೈನಲ್ಲಿ 4,400 ಪ್ರಕರಣಗಳು ವರದಿಯಾಗುತ್ತಿದೆ.
ಭಾರತದಲ್ಲಿ 1,259 ಕೋವಿಡ್ ಪ್ರಕರಣ ಪತ್ತೆ:
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,259 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,21,982ಕ್ಕೆ ಏರಿಕೆಯಾಗಿದೆ. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,378ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಚೀನಾದ ಕೋವಿಡ್ 19 ಲಾಕ್ ಡೌನ್ ನಿಂದ ತೈಲ ಬೆಲೆ ಹೆಚ್ಚಳ:
ಕೋವಿಡ್ 19 ಪ್ರಕರಣ ಹೆಚ್ಚಳದಿಂದಾಗಿ ಚೀನಾ ಶಾಂಘೈ ನಗರದಲ್ಲಿ ಲಾಕ್ ಡೌನ್ ಘೋಷಿಸಿದ ಪರಿಣಾಮ ತೈಲ ಬೆಲೆ ಶೇ.7ರಷ್ಟು ಹೆಚ್ಚಳವಾಗಿದೆ. ಕಳೆದ ಫೆಬ್ರವರಿ ತಿಂಗಳಿನಿಂದ ರಷ್ಯಾ, ಉಕ್ರೇನ್ ಯುದ್ಧದಿಂದಾಗಿ ಕಚ್ಛಾ ತೈಲ ಬೆಲೆಯೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳವಾಗಿತ್ತು.