ನವದೆಹಲಿ:ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಆರು ವಾರಗಳಲ್ಲಿ ಮಾರ್ಗಸೂಚಿ ರೂಪಿಸುವಂತೆ ಸುಪ್ರೀಂಕೋರ್ಟ್ ಬುಧವಾರ(ಜೂನ್ 30) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಇದನ್ನೂ ಓದಿ:ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಸುಧರ್ಮಾದ ಸಂಪಾದಕ ಕೆ.ವಿ. ಸಂಪತ್ ಕುಮಾರ್ ನಿಧನ
ಕೋವಿಡ್ ನಿಂದ ಸಾವನ್ನಪ್ಪಿರುವ ಕುಟುಂಬ ಸದಸ್ಯರಿಗೆ ಅಂತಹ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ಕೇಂದ್ರದ ಮನವಿಯನ್ನು ತಿರಸ್ಕರಿಸಿದೆ. ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವುದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್ ಡಿಎಂಎ)ದ ಪ್ರಕಾರ ಶಾಸನಬದ್ಧವಾಗಿ ಕಡ್ಡಾಯವಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ತನ್ನ ತೀರ್ಪಿನಲ್ಲಿ, ಆರು ವಾರಗಳಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ನೀಡಬೇಕಾದ ಪರಿಹಾರ ಮೊತ್ತ ನಿಗದಿಪಡಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.
ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ಸೇರಿದಂತೆ ಕನಿಷ್ಠ ಪ್ರಮಾಣದ ನೆರವನ್ನು ನೀಡದ ಮೂಲಕ ಎನ್ ಡಿಎಂಎ ತನ್ನ ಶಾಸನಬದ್ಧ ಕರ್ತವ್ಯ ನಿಭಾಯಿಸುವಲ್ಲಿ ವಿಫವಾಗಿದೆ ಎಂದು ಸುಪ್ರೀಂಕೋರ್ಟ್ ಪೀಠ ತಿಳಿಸಿದೆ.