ಫ್ರಾನ್ಸ್: ಯುಎಇ ಯಿಂದ ನಿಕರಾಗುವಾಗೆ 300 ಕ್ಕೂ ಅಧಿಕ ಭಾರತೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಫ್ರಾನ್ಸ್‌ನಲ್ಲಿ ಶಂಕಿತ “ಮಾನವ ಕಳ್ಳಸಾಗಣೆ” ಯ ಶಂಕೆಯ ಮೇಲೆ ವಶಕ್ಕೆ ಪಡೆದುಕೊಂಡಿರುವುದಾಗಿ ಫ್ರೆಂಚ್ ಏಜೆನ್ಸಿಗಳು ಮಾಹಿತಿ ನೀಡಿವೆ.
ಮಾನವಕಳ್ಳ ಸಾಗಣೆಯ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಮಾನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಫ್ರೆಂಚ್ ಅಧಿಕಾರಿಗಳು ಹೇಳಿದ್ದಾರೆ.
ಫ್ರೆಂಚ್ ಅಧಿಕಾರಿಗಳ ಹೇಳಿಕೆಯಂತೆ ವಿಮಾನ ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ನಿಕರಾಗುವಾಗೆ ಪ್ರಯಾಣಿಕರನ್ನು ಹೊತ್ತ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ಕಾರಣಗಳಿಂದ ವಿಮಾನ ಫ್ರಾನ್ಸ್ ನ ವಟ್ರಿಯಲ್ಲಿ ಲ್ಯಾಂಡ್ ಮಾಡಲಾಯಿತು ಅಷ್ಟರಲ್ಲಿ ಫ್ರೆಂಚ್ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಮಾನವ ಕಳ್ಳಸಾಗಣೆಗೆ ಬಳಸಲಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಪ್ರಯಾಣದ ಪರಿಸ್ಥಿತಿಗಳು ಮತ್ತು ಉದ್ದೇಶಗಳ ಬಗ್ಗೆ ನ್ಯಾಯಾಂಗ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಫ್ರೆಂಚ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನವನ್ನು ವ್ಯಾಟ್ರಿ ವಿಮಾನ ನಿಲ್ದಾಣದಲ್ಲೇ ಉಳಿಸಿಕೊಳ್ಳಲಾಗಿದೆ ಅಲ್ಲದೆ ವಿಮಾನದಲ್ಲಿದ್ದ ಇಬ್ಬರನ್ನು ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಫ್ರಾನ್ಸ್ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಣರಾಜ್ಯೋತ್ಸವಕ್ಕೆ ಭಾರತವು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: Daily Horoscope: ನೆಮ್ಮದಿಯ ದಿನಗಳು ಆರಂಭ, ಉದ್ಯೋಗದಲ್ಲಿ ಪ್ರತಿಭೆ, ಸಾಮರ್ಥ್ಯಕ್ಕೆ ಗೌರವ