Advertisement

ಹೊಳಪು ಮಾಡಿಕೊಡುವುದಾಗಿ ಹೇಳಿ ಐದೂವರೆ ಪವನ್‌ ಚಿನ್ನ ಕರಗಿಸಿದ ವಂಚಕ!

01:01 AM Aug 27, 2021 | Team Udayavani |

ಪುತ್ತೂರು: ಚಿನ್ನಾಭರಣಕ್ಕೆ ಹೊಳಪು ನೀಡುವುದಾಗಿ ಹೇಳಿ 2 ಪವನ್‌ನ ಮಾಂಗಲ್ಯ ಸರ ಸೇರಿದಂತೆ ಐದೂವರೆ ಪವನ್‌ ಚಿನ್ನಾಭರಣವನ್ನು ಕಳೆದುಕೊಂಡಿರುವ ಬಗ್ಗೆ ಗ್ರಾಮ ಪಂಚಾಯತ್‌ ಸದಸ್ಯೆ ಸಂಪ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Advertisement

ನೆಟ್ಟಣಿಗೆ ಮುಟ್ನೂರು ಗ್ರಾ.ಪಂ. ಸದಸ್ಯೆಯಾಗಿರುವ ಪೆರ್ನಾಜೆ ನಿವಾಸಿ ಇಂದಿರಾ ಅವರು ವಂಚನೆಗೆ ಒಳಗಾದವರು. ಚಿನ್ನಾಭರಣವನ್ನು ಹೊಳೆಯುವಂತೆ ಪಾಲಿಶ್‌ ಮಾಡಿ ಕೊಡುವುದಾಗಿ ನಂಬಿಸಿ ಪಡೆದುಕೊಂಡ ಆರೋಪಿ ಮಾಂಗಲ್ಯ ಸರ ಸೇರಿದಂತೆ ಸುಮಾರು ಐದೂವರೆ ಪವನ್‌ ಚಿನ್ನಾಭರಣವನ್ನು ಅನುಮಾನವೇ ಬಾರದಂತೆ ಆಕೆಯ ಕಣ್ಣೆದುರೇ ವಂಚಿಸಿ ಪರಾರಿಯಾಗಿದ್ದಾನೆ.

ಮನೆಯ ಶೋಕೇಸ್‌, ಟಿವಿ, ಬೆಳ್ಳಿ, ಬಂಗಾರದ ಆಭರಣ ಸೇರಿದಂತೆ ಹಲವು ವಸ್ತುಗಳನ್ನು ಸ್ವತ್ಛಗೊಳಿಸಿ ಹೊಳಪು ನೀಡುವ ಪೌಡರ್‌ ಮಾರಾಟ ಮಾಡುತ್ತಿರುವುದಾಗಿ ಹೇಳಿಕೊಂಡು ಇಂದಿರಾ ಅವರ ಮನೆಗೆ ಬಂದ ಅಪರಿಚಿತ ಯುವಕ, ಬೆಳ್ಳಿ, ಚಿನ್ನಾಭರಣ ಹೊಳೆಯುವಂತೆ ಈಗಲೇ ಪಾಲಿಶ್‌ ಮಾಡಿಕೊಡುವ ಮೂಲಕ ಮಾದರಿ ತೊರಿಸುವುದಾಗಿ ತಿಳಿಸಿದ್ದ. ಇದನ್ನು ನಂಬಿದ ಇಂದಿರಾ ಅವರು ತಮ್ಮ ಬಳಿಯಿದ್ದ ಕಾಲಿನ ಗೆಜ್ಜೆ ತೆಗೆದುಕೊಟ್ಟಿದ್ದರು. ಅದನ್ನು ಆ ವ್ಯಕ್ತಿ ಹಳದಿ ಪೌಡರ್‌ ಬಳಸಿ ಫಳಫಳ ಹೊಳೆಯುವಂತೆ ಮಾಡಿಕೊಟ್ಟಿದ್ದ. ಆ ಬಳಿಕ ಚಿನ್ನದ ಆಭರಣಗಳಿದ್ದರೆ ಅವುಗಳನ್ನೂ ಹೊಳೆಯುವಂತೆ ಮಾಡಿಕೊಡುತ್ತೇನೆಂದು ವಂಚಕ ನಂಬಿಸಿದ್ದ. ಈ ವೇಳೆ ಇಂದಿರಾ ಅವರು ತಮ್ಮ ಮಾಂಗಲ್ಯ ಸರ, ಚೈನು, ಎರಡು ಬಳೆ ನೀಡಿದ್ದಾರೆ. ಈ ವೇಳೆ ಚಿನ್ನಾಭರಣಗಳ ಮೇಲೆ ಹಳದಿ ಪೌಡರ್‌ ಸುರಿದು, ಲಿಕ್ವಿಡ್‌ ಮತ್ತು ಜೆಲ್‌ ಹಾಕಿ ಬ್ರಷ್‌ ಬಳಸಿ ತೊಳೆಯುವಂತೆ ನಟಿಸಿ ಬಳಿಕ ಬ್ಯಾಟರಿ ಚಾಲಿತ ಬೆಂಕಿ ನೀರಲ್ಲಿ ಕುದಿಸಿದ್ದಾನೆ. ಅನಂತರ ನೀರಿನಿಂದ ತೊಳೆದು ಅರಿಶಿನ ಪುಡಿ ಹಾಕಿ, ಪೇಪರ್‌ ಒಂದರಲ್ಲಿ ಪೊಟ್ಟಣ ಕಟ್ಟಿ ಕೊಟ್ಟಿದ್ದಾನೆ. ಅರ್ಧ ಗಂಟೆಯ ಬಳಿಕ ಪೊಟ್ಟಣ ತೆಗೆಯುವಂತೆ ಇಂದಿರಾ ಅವರಿಗೆ ತಿಳಿಸಿದ ವಂಚಕ ಅಲ್ಲಿಂದ ಕಾಲ್ಕಿತ್ತಿದ್ದ.

ಆತನ ವರ್ತನೆ ಬಗ್ಗೆ ಅನುಮಾನಪಟ್ಟ ಇಂದಿರಾ ಅವರು ಐದೇ ನಿಮಿಷದಲ್ಲಿ ಪೊಟ್ಟಣ ತೆರೆದು ನೋಡಿದಾಗ ಮಾಂಗ್ಯಲ ಸರ ಸೇರಿದಂತೆ ಚಿನ್ನಾಭರಣಗಳು ತುಂಡು ತುಂಡಾಗಿರುವುದು ಕಂಡು ಬಂತು. ವಂಚಕ ಚಿನ್ನದಂಶವನ್ನು ದ್ರವ ಮಾದರಿಯಲ್ಲಿ ಸಂಗ್ರಹಿಸಿ ಪಡೆದು ಪರಾರಿಯಾಗಿದ್ದ. ಈ ಕುರಿತು ಇಂದಿರಾ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ಆಟೋ ರಿಕ್ಷಾದಲ್ಲಿ ಬಂದಿದ್ದ:

Advertisement

ವಂಚಕ ಆಟೋ ರಿಕ್ಷಾದಲ್ಲಿ ಬಂದಿದ್ದ. ಇಂದಿರಾ ಅವರ ಹತ್ತಿರದ ಮನೆಯಲ್ಲಿಯೂ ಆತ ಇದೇ ಮಾದರಿಯಲ್ಲಿ ವಂಚನೆಗೆ ಪ್ರಯತ್ನ ಪಟ್ಟಿದ್ದ. ಆದರೆ ಆ ಮನೆಯಲ್ಲಿ ಅವರು ನಮಗೆ ಯಾವುದೂ ಬೇಡ ಎಂದು ತಿಳಿಸಿದ್ದರಿಂದ ಆತ ಇಂದಿರಾ ಅವರ ಮನೆಗೆ ಬಂದಿದ್ದ.

Advertisement

Udayavani is now on Telegram. Click here to join our channel and stay updated with the latest news.

Next