Advertisement
ಆರೋಪಿಗಳು ಹಮೀದ್ ಸುಹೇಲ್, ಇನಾಯತ್ ಖಾನ್, ನಯಾಜ್ ಅಹ್ಮದ್, ಆದಿಲ್ ಆಗಾ, ಸೈಯದ್ ಅಬ್ಟಾಸ್ ಆಲಿಖಾನ್, ಮಿಥುತ್ ಅಮಿತ್ ಸುಹಾಲಿ, ನೈನಾ ತಾರಾಚಂದ್, ಮಿಹಿರ್ ಶಶಿ ಕಾಂತ್ ಶಾ ಮತ್ತು ಸತೀಶ್ ಕೊಲಂಗಿ ಬಂಧಿ ತರು. ಈ ಪೈಕಿ ಬೆಂಗಳೂರಿನ ಇಬ್ಬರು,
Related Articles
Advertisement
ಇದೇ ರೀತಿಯಾಗಿ ಆ.18ರಂದು ಬಿಇಎಲ್ ಲೇಔಟ್ ನಿವಾಸಿ ಮನೆಯಿಂದಲೇ ಕೆಲಸದ ಆಮಿಷಕ್ಕೆ ಒಳಗಾಗಿ 18.75 ಲಕ್ಷ ರೂ. ಹೂಡಿಕೆ ಮಾಡಿ ಸೈಬರ್ ವಂಚನೆಗೆ ಒಳಗಾಗಿದ್ದರು. ಈ ಬಗ್ಗೆ ದಾಖಲಾದ ದೂರಿನ ಮೇರೆಗೆ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿಐ ಹಜರೇಶ್ ಎ.ಕಿಲೆದಾರ್ ನೇತೃತ್ವದ ತಂಡ ಪ್ರಕರಣ ದಾಖಲಿಸಿಕೊಂಡು ತಾಂತ್ರಿಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
2,143 ಕೇಸ್‌ಗಳು ಪತ್ತೆ: ಆರೋಪಿಗಳ ಬ್ಯಾಂಕ್ ಖಾತೆ ಗಳ ಆಧಾರವಾಗಿ ಇಟ್ಟುಕೊಂಡು ತನಿಖೆ ನಡೆಸಿದಾಗ ಕೇಂದ್ರ ಗೃಹ ಸಚಿವಾಲಯದ ಎನ್‌ಸಿಆರ್‌ಬಿ ಪೋರ್ಟಲ್‌ನಲ್ಲಿ ದೇಶದ 28 ರಾಜ್ಯ ಗಳಲ್ಲಿ ದಾಖಲಾಗಿದ್ದ 2,143 ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ 265 ಪ್ರಕರಣಗಳು ಅದರಲ್ಲಿಯೂ ಬೆಂಗಳೂರು ನಗರದ 14 ಠಾಣೆಗಳಲ್ಲಿ ದಾಖಲಾಗಿದ್ದ 135 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.
30 ಬ್ಯಾಂಕ್ ಖಾತೆ ಜಪ್ತಿ, 62.83 ಲಕ್ಷ ರೂ. ವಶಕ್ಕೆ :
ಆರೋಪಿಗಳು ಬಳಸಿದ ಬ್ಯಾಂಕ್ ಖಾತೆಗಳ ವಿವರ ಸಂಗ್ರಹಿಸಿ ತನಿಖೆ ನಡೆಸಿದಾಗ ದೇಶಾ ದ್ಯಂತ ದಾಖಲಾಗಿದ್ದ 2,143 ಪ್ರಕರಣಗಳಲ್ಲಿ 158 ಕೋಟಿ ರೂ. ವಂಚಿಸಿರುವುದು ಪತ್ತೆ ಯಾಗಿದೆ. ಈ ಪೈಕಿ 30 ಬ್ಯಾಂಕ್ ಖಾತೆಗಳು ಜಪ್ತಿ ಮಾಡಿದ್ದು, 62.83 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಜತೆಗೆ 11 ಮೊಬೈಲ್, 1 ಲ್ಯಾಪ್‌ಟಾಪ್, 15 ಸಿಮ್ ಕಾರ್ಡ್, 3 ಬ್ಯಾಂಕ್ ಚೆಕ್ ಬುಕ್‌ಗಳನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದರು.
ಬಂಧಿತರ ಆಸ್ತಿ ಜಪ್ತಿಗೆ ಇತರೆ ಇತರೆ ರಾಜ್ಯಗಳ ಜತೆ ಚರ್ಚೆ:
ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡ ಬಳಿಕ ತಮ್ಮ ನೆಟ್‌ವರ್ಕ್ ಬಳಸಿ ನಗದು ಡ್ರಾ ಮಾಡುವುದು ಅಥವಾ ಬೇರೊಂದು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ಆರೋಪಿ ಗಳು, ಅಮಾಯಕರು ಹಣ ಜಮೆ ಮಾಡಿದ ಕೆಲವೇ ತಾಸಿನಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ನಗದು ಡ್ರಾ ಮಾಡುತ್ತಾರೆ. ಅದರಿಂದ ಆರೋಪಿಗಳಿಂದ ಹಣ ಜಪ್ತಿ ಮಾಡುವುದು ದೊಡ್ಡ ಸವಾಲಾಗಿದೆ. ಹೀಗಾಗಿ ಆರೋಪಿಗಳ ಆಸ್ತಿ-ಪಾಸ್ತಿಗಳನ್ನು ಪತ್ತೆ ಹಚ್ಚಿ ಜಪ್ತಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ಇತರೆ ರಾಜ್ಯಗಳ ತನಿಖಾ ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.