Advertisement

Fraud: ಜಿಪಂ ಟಿಕೆಟ್ ಕೊಡಿಸುವುದಾಗಿ 2 ಲಕ್ಷ ರೂ.ವಂಚನೆ; ಡ್ರೋನ್‌ ಪ್ರತಾಪ್‌ ವಿರುದ್ಧ ಕೇಸ್

06:01 PM Feb 03, 2024 | Team Udayavani |

ಬೆಂಗಳೂರು: ಬಿಗ್‌ ಬಾಸ್‌ ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ  ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್‌ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ.ಪಡೆದುಕೊಂಡು ವಂಚಿಸಿರುವುದಾಗಿ ಚಂದನ್‌ ಕುಮಾರ್‌ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್‌ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಹೆಚ್‌.ಡಿ. ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್‌ ಹೌಸ್‌ ಗೆ ಭೇಟಿ ನೀಡುತ್ತೇನೆ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್‌ ಬಾಸ್‌ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು  ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್‌ ಬಾಸ್‌ ರನ್ನರ್‌ ಅಪ್‌ ಆದ ಬಳಿಕ ಪ್ರತಾಪ್‌ ನನ್ನ ಕರೆ ಹಾಗೂ ಮೆಸೇಜ್‌ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ತನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್‌ ದೂರಿನಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ ಚಂದನ್‌ ಕುಮಾರ್‌ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್‌ ಮಾಡಲಾಗಿದೆ.

ಆಡಿಯೋದಲ್ಲಿ ಏನಿದೆ?: ನನ್ನನ್ನು ಕಾಂಗ್ರೆಸ್‌ಗೆ ಬನ್ನಿ ಯೂತ್ ಕಾಂಗ್ರೆಸ್ ಪ್ರೆಸಿಡೆಂಟ್ ಮಾಡ್ತೀನಿ ಅಂದಿದ್ದರು. ಆಗ ನಾನು ಕುಮಾರಸ್ವಾಮಿಯವರ ಜೊತೆ ಓಡಾಡುತ್ತಿದ್ದೆನು. ಈಗಲೂ ಕುಮಾರಸ್ವಾಮಿಯವರನ್ನು ಭೇಟಿ ಮಾಡಲು ಹೋಗುತ್ತೇನೆ. ಆದರೆ, ಕುಮಾರಸ್ವಾಮಿಯವರ ಜೊತೆಗಿನ ಫೋಟೋ ಹಾಕಲ್ಲ. ನನ್ನ ಜೊತೆ ಕುಮಾರಸ್ವಾಮಿಯವರ ತೋಟದ ಮನೆಗೆ ಬಾ ಪರಿಚಯ ಮಾಡಿಸುತ್ತೇನೆ. ಅವರು ಕೆಟ್ಟ ಪದದಿಂದ ಬೈಯಬಹುದು, ಆದರೆ ತುಂಬಾ ಒಳ್ಳೆಯ ಮನುಷ್ಯ. ಡಿಸಿಎಂ ಡಿ.ಕೆ. ಶಿವಕುಮಾರ್ ತರ ಪೇಪರ್ ಎಸೆಯೋದು ಮಾಡಲ್ಲ. ಕುಮಾರಸ್ವಾಮಿ ಯಾರೇ ಹೋದ್ರು ದುಡ್ಡು ಕೊಡ್ತಾರೆ ಎಂದು ಹೇಳಿ ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

Advertisement

ಇತ್ತೀಚೆಗೆ ಸಾರಂಗ್‌ ಮಾನೆ ಎನ್ನುವವರು ಕೂಡ ಡ್ರೋನ್‌ ಪ್ರತಾಪ್‌ ವಿರುದ್ಧ ವಂಚನೆ ಆರೋಪವನ್ನು ಮಾಡಿ ದೂರು ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next