ಬೆಂಗಳೂರು: ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಮಹಿಳೆಗೆ ವಂಚಿಸಿದ ಪ್ರಕರಣವನ್ನು ಮೈಸೂರಿನ ಪೊಲೀಸ್ ಠಾಣೆಗೆ ವರ್ಗಾಯಿಸಲು ಸಿದ್ಧತೆ ನಡೆಸಿದೆ.
ವಿಜಯನಗರದ ನಿವಾಸಿ 25 ವರ್ಷದ ಸಂತ್ರಸ್ತೆ ರಂಗನಾಥ್ ವಿರುದ್ಧ ದೂರು ನೀಡಿದ್ದು, ಮೈಸೂರಿನಲ್ಲಿ ಉಪನ್ಯಾಸಕನಾಗಿರುವ ರಂಗನಾಥ್ ಜತೆ ಆಕೆಗೆ ಒಡನಾಟವಿತ್ತು. ಬೆಂಗಳೂರಿನಲ್ಲಿ ಈ ಸಂಬಂಧ ದಾಖಲೆಗಳಿಲ್ಲ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಈ ಮೈಸೂರಿಗೆ ವರ್ಗಾಯಿಸಲಾಗುತ್ತದೆ. ಅದಕ್ಕೂ ಮೊದಲು ಪ್ರಾಥಮಿಕವಾಗಿ ಸಂತ್ರಸ್ತೆ ಮತ್ತು ಆರೋಪಿತ ವ್ಯಕ್ತಿಯ ಹೇಳಿಕೆ, ಕೆಲ ದಾಖಲೆಪಡೆದುಕೊಂಡು ಬಳಿಕ ಪ್ರಕರಣವನ್ನು ಸಂಬಂಧಿಸಿದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.
ದೂರುದಾರ ಯುವತಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದರೆ, ಸಂಸದರ ಪುತ್ರ ರಂಗನಾಥ್ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದೂ ವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿ ಚಯ ಮಾಡಿಕೊಂಡಿರುವ ರಂಗನಾಥ್, ಆಕೆಯ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ ಮೈಸೂರಿನ ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ಸಂಪರ್ಕ ಬೆಳೆಸಿದ್ದರು. ನಂತರ ಆಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮತ್ತೂಂದೆಡೆ ಸಂತ್ರಸ್ತೆ, ಕೆಲ ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ರೂ. ಕೊಡುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ರಂಗನಾಥ್ ಕೂಡ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ.