Advertisement

Fraud case;ಬಾಯಲ್ಲಿ ನೊರೆ..! ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು

03:58 PM Sep 15, 2023 | Team Udayavani |

ಬೆಂಗಳೂರು: ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ನ್ಯಾಯಾಂಗ ಬಂಧನದಲ್ಲಿರುವ ಚೈತ್ರಾಳನ್ನು ಗುರುವಾರ ಸುದೀರ್ಘ ವಿಚಾರಣೆ ನಡೆಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಡಲಾಗಿತ್ತು. ಶುಕ್ರವಾರ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆ ತಂದಾಗ ದಿಢೀರ್ ಕುಸಿದು ಬಿದ್ದಿದ್ದು ಬಾಯಲ್ಲಿ ನೊರೆ ಬರಲಾರಂಭಿಸಿದೆ. ತತ್ ಕ್ಷಣ ಪರೀಶಿಸಲಿಸಿದ ಪೊಲೀಸರು ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ನಡೆಸಿದ್ದು, ಆಕೆಯ ಆರೋಗ್ಯ ಸ್ಥಿತಿಯ ಬಗ್ಗೆ ವರದಿ ನೀಡುತ್ತೇವೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

ಸಿನಿಮೀಯ ರೀತಿಯಲ್ಲಿ ಸಂಚು ರೂಪಿಸಿ ಉದ್ಯಮಿಯೊಬ್ಬರಿಗೆ ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚಿಸಿದ್ದ ಆರೋಪದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಬಂಧನಕ್ಕೊಳಗಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next