Advertisement

ಗೃಹ ಸಚಿವರ ಹೆಸರಿನಲ್ಲಿ ವಂಚನೆ: ಆರೋಪಿ ಸೆರೆ

10:32 PM Nov 04, 2021 | Team Udayavani |

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದ  ಆರೋಪದಲ್ಲಿ ಶಿವಮೊಗ್ಗ ಮೂಲದ ಭವಾನಿರಾವ್‌ ಮೋರೆ (37) ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಕಬ್ಬನ್‌ಪಾರ್ಕ್‌ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ  ಬಂಧಿಸಿದ್ದಾರೆ.

Advertisement

ಆರೋಪಿಯು ವಿಜಯನಗರ ನಿವಾಸಿ ಹಾಗೂ ಕರ್ನಾಟಕ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಓನರ್ಸ್‌ ವುಮೆನ್‌ ಎಂಪ್ಲಾಯೀಸ್‌ ಸರ್ವಿಸ್‌ ಅಸೋಸಿಯೇಶನ್‌ ಜಂಟಿ ಕಾರ್ಯದರ್ಶಿ ಸುರೇಶ್‌ ಎಂಬವರಿಗೆ 25 ಲಕ್ಷ ರೂ. ವಂಚಿಸಿದ್ದ. ಈ ಸಂಬಂಧ ದೂರು ದಾಖಲಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ತಾನು ಶಿವಮೊಗ್ಗ ಮೂಲದ ಬಿಜೆಪಿ ಮುಖಂಡನಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಸಹಿತ ಎಲ್ಲ ಸಚಿವರು ಹಾಗೂ ಬಿಜೆಪಿ ಮುಖಂಡರು ಪರಿಚಯವಿದೆ ಎಂದು ಹೇಳಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next