Advertisement

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

10:26 AM Dec 24, 2024 | Team Udayavani |

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಡಿಜಿಟೆಲ್‌ ಅರೆಸ್ಟ್‌ ಮಾಡಿರುವುದಾಗಿ ಒಂದು ತಿಂಗಳ ಕಾಲ ನಗರದ ಟೆಕಿಯನ್ನು ಬೆದರಿಸಿದ ಪ್ರಕರಣ ಸಂಬಂಧ ಆರೋಪಿಯ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.

Advertisement

ಸಿಡಿಆರ್‌ ವಿಶ್ಲೇಷಣೆ ಹಾಗೂ ಆರೋಪಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತನಿಖಾ ತಂಡ ರಚಿಸ ಲಾಗಿದೆ. ಸದ್ಯ ಪ್ರಾಥಮಿಕ ಮಾಹಿತಿ ಪ್ರಕಾರ ಈಶಾನ್ಯ ರಾಜ್ಯ ಹಾಗೂ ವಿದೇಶದಲ್ಲಿ ಕುಳಿತು ವಂಚಿಸಿರುವ ಮಾಹಿತಿ ಸಿಕ್ಕಿದೆ. ತನಿಖೆ ನಡೆಯುತ್ತಿದೆ ಎಂದು ಸೆನ್‌ ಠಾಣೆ ಪೊಲೀಸರು ಮಾಹಿತಿ ನೀಡಿದರು.

ನ.11ರಂದು ಜಕ್ಕೂರು ನಿವಾಸಿ ಕೆ.ಎಸ್‌.ವಿಜಯ್‌ ಕುಮಾರ್‌ ಮೊಬೈಲ್‌ಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ತಾನು ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌)ದಿಂದ ಮಾತನಾಡುತ್ತಿದ್ದು, ನಿಮ್ಮ ಮೊಬೈಲ್‌ ಸಂಖ್ಯೆಯಿಂದ ತುಂಬಾ ಮೆಸೇಜ್‌ ಗಳು ಹಾಗೂ ಜಾಹೀರಾತುಗಳು ಡೆಲಿವರಿಯಾಗಿವೆ. ಈ ಸಂಬಂಧ ಮುಂಬೈ ಕ್ರೈಂ ಬ್ರಾಂಚ್‌ನಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ನಿಮ್ಮ ಸಿಮ್‌ ಕಾರ್ಡ್‌ ಬ್ಲಾಕ್‌ ಮಾಡುವುದಾಗಿ ಹೇಳಿ ವಂಚಕರು ಹೆದರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next