Advertisement

ವಿದ್ಯಾರ್ಥಿಗಳಿಗೆ ಉಚಿತ ಆಟೋ ಸೇವೆ

07:32 AM Jun 24, 2020 | Suhan S |

ಗದಗ: ಜೂ.25ರಿಂದ ಆರಂಭಗೊಳ್ಳಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಗದಗ-ಬೆಟಗೇರಿ ನಗರದಲ್ಲಿ ವಿವಿಧ ಸ್ಥಳಗಳಿಂದ ಅವರ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಅಟೋ ಸೇವೆಯ ವ್ಯವಸ್ಥೆ ಮಾಡಲಾಗಿದೆ ಎಂದು ಯಂಗ್‌ ಇಂಡಿಯಾ ಪರಿವಾರ ಸಂಸ್ಥಾಪಕ ಅಧ್ಯಕ್ಷ ವೆಂಕನಗೌಡ ಗೋವಿಂದಗೌಡ್ರ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿಯುವವರೆಗೂ ಗದಗ-ಬೆಟಗೇರಿ ಅವಳಿ ನಗರದ ವಿವಿಧ ಭಾಗಗಳಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತವಾಗಿ ಪ್ರಯಾಣಿಸಲು ಯಂಗ್‌ ಇಂಡಿಯಾ ಅಟೋ ಸಂಘಟನೆಯಿಂದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಗದಗ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ, ಮುಳಗುಂದ ನಾಕಾ, ಮಹಾತ್ಮ ಗಾಂಧಿ ಸರ್ಕಲ್‌, ಹಾತಲಗೇರಿ ನಾಕಾ, ಬೆಟಗೇರಿ ಬಸ್‌ ನಿಲ್ದಾಣದಿಂದ ಯಂಗ್‌ ಇಂಡಿಯಾ ಸಂಘಟನೆಯ ಬಿಳಿ ಬಣ್ಣದ ಧ್ವಜ ಕಟ್ಟಿಕೊಂಡು ಒಂದು ನೂರಕ್ಕೂ ಹೆಚ್ಚು ಆಟೋಗಳು ಅವಳಿ ನಗರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಅವರ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲಿವೆ ಎಂದು ತಿಳಿಸಿದ್ದಾರೆ.

ನಗರದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಿನೋದಕುಮಾರ 79750005000, ಸೋಮು ಮುಳಗುಂದ 8088983066, ಹನುಮಂತ ಸಿಂಗನಹಳ್ಳಿ 9620813347 ಹಾಗೂ ಬೆಟಗೇರಿ ಭಾಗದ ವಿದ್ಯಾರ್ಥಿಗಳು ಶಿವಾಜಿ ಸಿಂಗದ 9008614435, ಮುಕ್ತುಮ್‌ ಜೋರಮ್‌ 9591295651 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next