Advertisement

ಪ್ರತಿ ವರ್ಷ 25 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ

09:43 PM Mar 02, 2020 | Lakshmi GovindaRaj |

ಕೆ.ಆರ್‌.ನಗರ: ಪ್ರತಿ ವರ್ಷ 25 ಸಾವಿರಕ್ಕೂ ಅಧಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾ.ರಾ.ಸ್ನೇಹ ಬಳಗದ ವತಿಯಿಂದ ಉಚಿತ ನೋಟ್‌ ಪುಸ್ತಕ ವಿತರಿಸಲಾಗುತ್ತಿದೆ. ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2019-20ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾಗುವ ಉಚಿತ ಲ್ಯಾಪ್‌ಟಾಪ್‌ಗ್ಳನ್ನು ವಿತರಿಸಿ ಅವರು ಮಾತನಾಡಿದರು.

Advertisement

ಕಳೆದ ಬಾರಿ ನೀಡಿದ ಭರವಸೆಯಂತೆ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗ್ಳನ್ನು ವಿತರಿಸುತ್ತಿದ್ದು, ಇದರ ಪ್ರಯೋಜನವನ್ನು ಪಡೆದು ಎಲ್ಲರೂ ಉತ್ತಮ ಶಿಕ್ಷಣ ಪಡೆಯಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಮಹಿಳಾ ಪ್ರಥಮ ದರ್ಜೆ ಕಾಲೇಜು ಉತ್ತಮ ಶೈಕ್ಷಣಿಕ ಸಾಧನೆ ಮಾಡುತ್ತಿದ್ದು, ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನನ್ನ ಶಾಸಕತ್ವದ ಅವಧಿಯಲ್ಲಿ ವಿದ್ಯಾರ್ಥಿನಿಯರು ಉನ್ನತ ವ್ಯಾಸಂಗ‌ಕ್ಕೆ ಜಿಲ್ಲಾ ಕೇಂದ್ರಕ್ಕೆ ತೆರಳುವುದನ್ನು ತಪ್ಪಿಸಿ ಅವರ ಕಲಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಪಟ್ಟಣದಲ್ಲಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಿಸುವುದರ ಜತೆಗೆ ಅದಕ್ಕೆ ಅಗತ್ಯ ಅನುದಾನ ನೀಡಿ ನೂತನ ಕಟ್ಟಡ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಶೈಕ್ಷಣಿಕ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ತಮ್ಮ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ತಾಲೂಕಿಗೆ 6 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಮತ್ತಿತರ ವಸತಿ ಶಾಲೆ ಆರಂಭಿಸಲಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜ ಪಡೆಯುತ್ತಿದ್ದಾರೆ. ತಾಲೂಕಿನಲ್ಲಿರುವ 800ಕ್ಕೂ ಅಧಿಕ ವಿಕಲಚೇತನರಿಗೆ ಜೀವ ವಿಮೆ ಮಾಡಿಸಿ ಪ್ರತಿ ವರ್ಷ ತಲಾ 2 ಸಾವಿರ ರೂ. ವಾರ್ಷಿಕ ವಿಮಾ ಕಂತನ್ನು ವೈಯಕ್ತಿಕವಾಗಿ ಪಾವತಿಸುತ್ತಿದ್ದೇನೆ.

ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಡಾ.ಕೋಕಿಲಾ, ತಹಶೀಲ್ದಾರ್‌ ಎಂ.ಮಂಜುಳಾ, ತಾಪಂ ಇಒ ಎಂ.ಎಸ್‌.ರಮೇಶ್‌, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಕಾರ್ಯದರ್ಶಿ ಕೆ.ಟಿ.ರಮೇಶ್‌, ಉಪನ್ಯಾಸಕರಾದ ಸುನೀಲ್‌, ಮೋಹನ್‌, ವಿಜಯ್‌, ಕೆ.ಎಲ್‌.ರಮೇಶ್‌, ಸಿಬ್ಬಂದಿ ಮಹದೇವಸ್ವಾಮಿ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next