Advertisement

ಶಾಸಕ ರಘುಪತಿ ಭಟ್ ರವರ ಉಚಿತ ಬಸ್ಸಿನ ಸೇವೆ ರಾಜ್ಯಕ್ಕೆ ಹೊಸ ಪ್ರಯೋಗ : ಶೋಭಾ ಕರಂದ್ಲಾಜೆ

03:12 PM May 25, 2020 | Team Udayavani |

ದೇಶದಲ್ಲಿ ಲಾಕ್ ಡೌನ್ ಸಡಿಲಗೊಂಡ ನಂತರ ಹಲವಾರು ಚಟುವಟಿಕೆಗಳು ಆರಂಭಗೊಂಡಿದ್ದು, ದಿನಂಪ್ರತಿ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರ ಸಂಕಷ್ಟವನ್ನು ಅರಿತು ಹಾಗೂ ಅವರ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಕೈಗೊಂಡ ಉಚಿತ ಬಸ್ಸಿನ ವ್ಯವಸ್ಥೆ ರಾಜ್ಯಕ್ಕೆ ಹೊಸ ಪ್ರಯೋಗ‌ ಎಂದು ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಹೇಳಿದರು.

Advertisement

ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಗಣೇಶೋತ್ಸವ ಸಮಿತಿ (ರಿ) ಕಡಿಯಾಳಿ ಇವರ ಸಹಯೋಗದಲ್ಲಿ ನಗರ ಸಭಾ ಸದಸ್ಯರು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ಸಹಕಾರದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರಂಭಿಸಲಾದ ಉಚಿತ ಬಸ್ಸಿನ ಸೇವೆಗೆ ಬ್ರಹ್ಮಾವರ ಬಸ್ಸು ನಿಲ್ದಾಣದಲ್ಲಿ ಇಂದು ಚಾಲನೆ ನೀಡಿ ಮಾತನಾಡಿದರು.

ಶಾಸಕರಾದ ರಘುಪತಿ ಭಟ್ ಅವರು ಮಾತನಾಡಿ ಜನಸಾಮಾನ್ಯರಿಗೆ ಅನುಕೂಲ ಆಗಲು ಪ್ರಾಯೋಗಿಕವಾಗಿ ಒಂದು ವಾರದ ಮಟ್ಟಿಗೆ ಉಚಿತ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ಬಸ್ಸಿನಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಪ್ರಯಾಣಿಕರ ವಿವರಗಳನ್ನು ಪಡೆದುಕೊಳ್ಳವುದು ಮೊದಲಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಸಾರ್ವಜನಿಕರು ಒಗ್ಗಿಕೊಂಡ ನಂತರ ನಿರಂತರವಾಗಿ ಬಸ್ಸು ಸಂಚಾರಕ್ಕೆ ಅವಕಾಶ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಉಪಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ, ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ವೀಣಾ ನಾಯ್ಕ್, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಮತ್ತು ತಾಲೂಕು ಪಂಚಾಯತ್ ಸದಸ್ಯರು ಹಾಗೂ ಪಂಚಾಯತ್ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next