Advertisement

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ:  ಸುರಕ್ಷತೆಗಾಗಿ ಹೊಸ ಹೆಜ್ಜೆ

10:12 AM Oct 30, 2019 | Team Udayavani |

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಗಾಗಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೊಸ ಯೋಜನೆ ಕೈಗೊಂಡಿದ್ದು, ಮಹಿಳೆಯರಿಗಾಗಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

Advertisement

ಇಂದಿನಿಂದ ದಿಲ್ಲಿ ಸಾರಿಗೆ ಸಂಸ್ಥೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಬಹುದು. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕೆ ಇದು ಒಂದು ಐತಿಹಾಸಿಕ ಹೆಜ್ಜೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಸುರಕ್ಷತೆಗಾಗಿ ಮತ್ತೊಂದು ಹೆಜ್ಜೆ ಇಟ್ಟಿರುವ ಕೇಜ್ರಿವಾಲ್, ಪ್ರತಿಯೊಂದು ಬಸ್ ಗಳಲ್ಲಿ ಮಾರ್ಷಲ್ ಗಳನ್ನು ನಿಯೋಜಿಸಿದ್ದಾರೆ. ಇದಕ್ಕಾಗಿ ಒಟ್ಟು 13000 ಬಸ್ ಮಾರ್ಷಲ್ ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next