Advertisement

ಉಚಿತ ಬಸ್‌ಪಾಸ್‌ ನೀಡಲು ಆಗ್ರಹ 

02:41 PM Jun 06, 2018 | Team Udayavani |

ಮೈಸೂರು: ರಾಜ್ಯದ ಎಲ್ಲಾ ವರ್ಗದ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಆಗ್ರಹಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಮಂಗಳವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು. 

Advertisement

ಎಬಿವಿಪಿ ಪ್ರತಿಭಟನೆ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ಸದಸ್ಯರು, ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವಂತೆ ಒತ್ತಾಯಿಸಿದರು. 

ರಾಜ್ಯ ಸರ್ಕಾರ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಿರುವುದು ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಾರಣವಾಗಿದೆ. ಆದರೆ ಇಂದಿನ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವುದಾಗಿ ಘೋಷಿಸಿತ್ತು.

ಈಗ ಚುನಾವಣೆ ವೇಳೆ ನೀಡಿದ್ದ ಪ್ರಣಾಳಿಕೆಗೆ ವಿರುದ್ಧವಾಗಿ ನಡೆಯುತ್ತಿರುವ ಸರ್ಕಾರ ಹಿಂದಿನ ಬಜೆಟ್‌ಗೆ ವಿರುದ್ಧವಾಗಿ ನಡೆದುಕೊಂಡು ವಿದ್ಯಾರ್ಥಿ ವಿರೋಧಿ ಕ್ರಮ ವಹಿಸುತ್ತಿದೆ. ಸರ್ಕಾರದ ಈ ನಡೆ ಖಂಡನೀಯ, ಸರ್ಕಾರ ಈಗಲಾದರೂ ರಾಜ್ಯದ ಎಲ್ಲಾ ವರ್ಗದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಗಳಿಗೆ ಉಚಿತವಾಗಿ ಬಸ್‌ಪಾಸ್‌ ನೀಡಬೇಕೆಂದು ಒತ್ತಾಯಿಸಿದರು.

ಎಐಡಿಎಸ್‌ಒ ಒತ್ತಾಯ: ನಗರದ ವಿವಿಧ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಆಲ… ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ ಸದಸ್ಯರು, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. 

Advertisement

ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜ್ಯದ ಎಲ್ಲಾ  ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿತ್ತು. ಸರ್ಕಾರದ ಈ ನಿರ್ಧಾರದಿಂದ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಂತಸ ತಂದಿತ್ತು.

ಆದರೆ ಹೊಸ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಲಾಗುತ್ತಿಲ್ಲ ಎನ್ನುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ಬಸ್‌ ಟಿಕೆಟ್‌ ಖರೀದಿಸಿ, ತರಗತಿಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಅಲ್ಲದೆ ಸರ್ಕಾರದ ತೀರ್ಮಾನದಿಂದ ವಿದ್ಯಾರ್ಥಿಗಳು ಆತಂಕಕ್ಕೆ ಸಿಲುಕಿದ್ದು, ಈ ನಿಟ್ಟಿನಲ್ಲಿ ಉಚಿತ ಬಸ್‌ಪಾಸ್‌ ನೀಡುವ ನಿರ್ಧಾರವನ್ನು ತುರ್ತಾಗಿ ಜಾರಿಗೊಳಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು. 

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಕಾರ್ಯದರ್ಶಿ ಚಂದ್ರಕಲಾ, ಎಐಡಿವೈಒ ಕಾರ್ಯದರ್ಶಿ ಸುನಿಲ…, ಎಐಎಂಎಸ್‌ ಎಸ್‌ ಉಪಾಧ್ಯಕ್ಷೆ ಸೀಮಾ, ಬಸವರಾಜು, ಎಚ್‌.ಎಂ.ಆಸಿಯಾ ಬೇಗಂ, ಆಕಾಶ್‌ ಕುಮಾರ್‌, ಸುಮ, ರಂಜಿತಾ ಸೇರಿದಂತೆ ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ… ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌ ಸದಸ್ಯರು ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next