Advertisement

ಗಡಿ ಹಳ್ಳಿ ಮರಾಠಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ!

05:57 PM Jul 28, 2022 | Team Udayavani |

ಬೆಳಗಾವಿ: ಕರ್ನಾಟಕ ರಾಜ್ಯದ ಗಡಿ ಭಾಗದ ವಿವಾದಕ್ಕೆ ಒಳಪಟ್ಟ 865 ಹಳ್ಳಿಗಳ ವಿದ್ಯಾರ್ಥಿಗಳಿಗೆ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಿಂದ ಉಚಿತ ಶಿಕ್ಷಣ ನೀಡುವ ಆಕರ್ಷಕ ಯೋಜನೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಸಿ. ಸೋಮಶೇಖರ ತಿಳಿಸಿದ್ದಾರೆ.

Advertisement

ಕರ್ನಾಟಕ ರಾಜ್ಯದ ಬೆಳಗಾವಿ, ಕಲಬುರ್ಗಿ, ಬೀದರ ಗಡಿ ಭಾಗದ ಮರಾಠಿ ಶಾಲೆಯ ವಿದ್ಯಾರ್ಥಿಗಳಿಗೆ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಿಂದ ಉಚಿತ ಶಿಕ್ಷಣ ನೀಡುವ ಯೋಜನೆ ಬಗ್ಗೆ ವಿವಿಧ ಸಂಘಟನೆಗಳ ಮೂಲಕ ಶಿವಾಜಿ ವಿವಿ ಬೆಳಗಾವಿಯಲ್ಲಿ ಎಂ.ಇ.ಎಸ್‌ ರವರೊಂದಿಗೆ ಸಭೆ ನಡೆಸಿ, ಜಾಗೃತಿ ಮೂಡಿಸಿರುವುದು ಗಡಿ ಅಭಿವೃದ್ಧಿ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಮರಾಠಿ ಭಾಷಾ ಪ್ರದೇಶಗಳಿಗೆ ಮಹಾರಾಷ್ಟ್ರ ಸರ್ಕಾರ ಇಂತಹ ಯೋಜನೆಗಳನ್ನು ನೀಡುವ ಮೂಲಕ ನಮ್ಮವೇ ಈ ಹಳ್ಳಿಗಳು ಎಂಬ ದಾಖಲೆ ಸೃಷ್ಟಿಸುವ ಹುನ್ನಾರವಿದು ಎಂಬುದಾಗಿ ಬೆಳಗಾವಿ ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷರು ಸಂದೇಹ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವೂ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯವ್ಯಾಪ್ತಿಯ ರಾಜ್ಯದ 19 ಗಡಿ ಜಿಲ್ಲೆಗಳ ಹಾಗೂ 63 ಗಡಿ ತಾಲೂಕುಗಳು ಹಾಗೂ ಮಹಾರಾಷ್ಟ್ರದಲ್ಲಿನ ಕನ್ನಡ ಪ್ರದೇಶಗಳೂ ಸೇರಿದಂತೆ 6 ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಸಲುವಾಗಿ ಗಡಿ ಅಭಿವೃದ್ಧಿ ಪ್ರಾಧಿಕಾರ ಶೆ„ಕ್ಷಣಿಕ ಸಂಸ್ಥೆಗಳಿಗೆ ತನ್ನ ಆರ್ಥಿಕ ಇತಿಮಿತಿಯಲ್ಲಿ ಮೂಲ ಸೌಲಭ್ಯಗಳಿಗೆ ಅನುದಾನ ನೀಡುತ್ತಾ ಬಂದಿರುತ್ತದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಮ್ಮ ರಾಜ್ಯದ ಗಡಿ ಕನ್ನಡ ಪ್ರದೇಶಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಟ್ಟು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ಕನ್ನಡ ಮಾಧ್ಯಮದತ್ತ ಆಕರ್ಷಣೆ ಮಾಡುವುದೂ ಸೇರಿದಂತೆ ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಸಲುವಾಗಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಗಡಿ ಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ರಾಜ್ಯದ ಗಡಿ ಭಾಗದ ಕನ್ನಡ ಪರ ಸಂಘಟನೆಗಳೊಡನೆ ಗಡಿ ಅಭಿವೃದ್ಧಿ ಪ್ರಾಧಿಕಾರ ಸಭೆ ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು. ಅಲ್ಲದೇ ಈ ಬಗ್ಗೆ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೋರಲಾಗುವುದು. ಈ ವಿಷಯವನ್ನು ರಾಜ್ಯದ ಶಿಕ್ಷಣ ಸಚಿವರ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದು ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next