Advertisement
ಯಶವಂತಪುರ ವಿಧಾನ ಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೆಂಗೇರಿ ಉಪನಗರದ ಶೇಷಾದ್ರಿಪುರಂ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಕನ್ನಡ ಮಣ್ಣಿನ ಸಂಸ್ಕೃತಿಯಲ್ಲಿ ಸರ್ವಜನಾಂಗವನ್ನೂ ಪ್ರೀತಿಸುವ ಧೋರಣೆಗಳಿದ್ದರೂ ಬುದ್ಧಿಜೀವಿಗಳನ್ನೊಳಗೊಂಡ ಸಾಹಿತ್ಯ ಕ್ಷೇತ್ರದಲ್ಲಿಯೂ ಜಾತೀಯತೆ ಗುಂಪುಗಾರಿಕೆ ಮರೆಯಾಗಿಲ್ಲ.
Related Articles
Advertisement
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ ಮಾತನಾಡಿ, “ಕನ್ನಡ ಭಾಷಾ ಬೆಳವಣಿಗೆಯಲ್ಲಿ ಹಲವಾರು ಮಹನೀಯರ ನಿಸ್ವಾರ್ಥ ಸೇವೆ ಹಾಗೂ ಕೊಡುಗೆಗಳಿವೆ. ಅವರನ್ನು ಸ್ಮರಿಸುವ ಅಗತ್ಯವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಪ್ರೇರಿತವಾಗಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ ಮೂಲಕ ಅನ್ಯ ಭಾಷಿಕರಿಗೂ ಕನ್ನಡ ಕಲಿಸಿ ಕನ್ನಡ ವಾತಾವರಣ ನಿರ್ಮಾಣ ಮಾಡಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ,’ ಎಂದರು.
ಯಶವಂತಪುರ ವಿಧಾನ ಸಭಾ ಕ್ಷೇತ್ರ ಶಾಸಕ ಎಸ್.ಟಿ.ಸೋಮಶೇಖರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ಶ್ರಿಮಹಾಲಕ್ಷಿ¾ ದೇವಸ್ಥಾನ ಸಂಸ್ಥಾಪಕ ಅಧ್ಯಕ್ಷೆ ಡಾ.ಸಂಗೀತಮ್ಮ, ಕಪೂಚಿನ್ ಧರ್ಮಗುರು ಆಲ್ವಿನ್ ಡಯಾಸ್, ಕೆಂಗೇರಿ ವಾರ್ಡ್‌ನ ಪಾಲಿಕೆ ಸದಸ್ಯ ವಿ.ವಿ.ಸತ್ಯನಾರಾಯಣ, ಕೆಂಗೇರಿ ಪುರಸಭೆಯ ಮಾಜಿ ಉಪಾಧ್ಯಕ್ಷ ಜಿ.ಮುನಿರಾಜು, ಯಶವಂತಪುರ ಕ.ಸಾ.ಪ ಅಧ್ಯಕ್ಷ ಶ್ರೀನಿವಾಸ್,’ ಮತ್ತಿತರರು ಉಪಸ್ಥಿತರಿದ್ದರು.
ಬೆಳಿಗ್ಗೆ ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಿಂದ ಶೇಷಾದ್ರಿಪುರಂ ಕಾಲೇಜುವರೆಗೆ ಬೆಳ್ಳಿ ರಥದಲ್ಲಿ ಸಮ್ಮೇಳನಾಧ್ಯಕ್ಷರನ್ನ ವಿವಿಧ ಜಾನಪದ ಕಲಾ ತಂಡದೊಂದಿಗೆ ವಿವಿಧ ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಕನ್ನಡ ಪರ ಘೋಷಣೆಗಳೊಂದಿಗೆ ಕರೆತಂದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರುಗಳನ್ನ ಸನ್ಮಾನಿಸಿ ಗೌರವಿಸಲಾಯಿತು.