Advertisement

ಹುಣಸೂರು: ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

06:22 PM Apr 13, 2022 | Team Udayavani |

ಹುಣಸೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಯಲ್ಲಿ ಭಾಗವಹಿಸುವ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಇಂದು ಏರ್ಪಡಿಸಲಾಗಿದ್ದು, ಸ್ವತಃ  ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಕಾರಿ ಹೆಚ್.ಡಿ.ಗಿರೀಶ್ ಅವರೇ ಆರೋಗ್ಯ ತಪಾಸಣೆಗೊಳಪಡುವ ಮೂಲಕ ಚಾಲನೆ ನೀಡಿದರು.

Advertisement

ತಾಲೂಕಿನ ಹೆಗ್ಗಂದೂರು ಗ್ರಾಮ ಪಂಚಾಯಿತಿಯ ವಡ್ಡಂಬಾಳು ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದ್ದು, ಸುಮಾರು  20ಕ್ಕೂ ಹೆಚ್ಚು ನರೇಗಾ ಕೂಲಿಕಾರರು ಹಾಗೂ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಈ ವೇಳೆ  ಸಕ್ಕರೆ ಖಾಯಿಲೆ ಹಾಗೂ ಬಿಪಿ ಉಳ್ಳವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಮಾರ್ಗದರ್ಶನ ಮಾಡಲಾಯಿತು. ಈ ವೇಳೆ  ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು, ಸಹಾಯಕ ನಿರ್ದೇಶಕರಾದ ಹೆಚ್.ಡಿ.ಲೋಕೇಶ್, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಕಾರಿ ಮಹದೇವ್, ಗ್ರಾಮಪಂಚಾಯಿತಿ ಆರೋಗ್ಯ ಅಭಿಯಾನ ಸಂಯೋಜಕರಾದ ವಸಂತ್‌ಕುಮಾರ್ ಸೇರಿದಂತೆ ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next