Advertisement
ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿ ಗತಿಯ ಕುರಿತು ಪ್ರಗತಿ ಪರಿಶೀಲನ ಸಭೆ ನಡೆಸಿ ಮಾತನಾಡಿದ ಅವರು ಪ್ರತೀ ದಿನ ಹೋಂ ಐಸೋಲೇಶನ್‌ನಲ್ಲಿರುವವರನ್ನು ಭೇಟಿ ಮಾಡಿ ಅವರ ಆರೋಗ್ಯ ಪರಶೀಲನೆ ಕುರಿತು ವರದಿ ಪಡೆಯಬೇಕು ಎಂದರು.
ಜಿಲ್ಲೆಯಲ್ಲಿ ಆಕ್ಸಿಜನ್ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಬಹ್ರೈನ್ ಮತ್ತು ಕುವೈಟ್‌ನಿಂದ ಬರುವ ಆಕ್ಸಿಜನ್‌ನಲ್ಲಿ ಸಹ ಜಿಲ್ಲೆಗೆ ಸಾಕಷ್ಟು ಪ್ರಮಾಣದ ಆಕ್ಸಿಜನ್ ಸರಬರಾಜು ಮಾಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ 1,500 ಎಲ್‌ಪಿಎಂ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಸರಕಾರದಿಂದ ಅನುಮತಿ ದೊರೆತಿದೆ ಎಂದರು. ರೆಮಿಡಿಸಿವಿರ್ ಪೂರೈಕೆ
ಜಿಲ್ಲೆಗೆ 480 ರೆಮಿಡಿಸಿವರ್ ಸರಬರಾಜು ಮಾಡಿದ್ದು, ಇನ್ನೂ ಹೆಚ್ಚುವರಿಯಾಗಿ 1000 ರೆಮಿಡಿಸಿವರ್ ಸರಬರಾಜು ಮಾಡುವಂತೆ ಸೂಚನೆ ನೀಡಲಾಗಿದೆ ಎಂದವರು ಹೇಳಿದರು.