Advertisement

ಉಕ್ರೇನ್‌ ನಿಂದ ಆಗಮಿಸಿದ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಕೆಎಸ್ಆರ್ ಟಿಸಿ ಪ್ರಯಾಣ

10:48 AM Feb 28, 2022 | Team Udayavani |

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ ನಿಂದ ಹಿಂದಿರುಗಿದ ನಮ್ಮ ಜನರು, ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿಯನ್ನು ಪರಿಗಣಿಸಿ, ಕರ್ನಾಟಕದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳೀಯ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

Advertisement

ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕರ್ನಾಟಕ ರಾಜ್ಯ ವಿಮಾನ ನಿಲ್ದಾಣದೊಳಗಿನ ಎಲ್ಲಾ ನೋಡಲ್ ಅಧಿಕಾರಿಗಳು ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣವನ್ನು ಅನುವು ಮಾಡಿಕೊಡಬೇಕು ಎಂದಿದ್ದಾರೆ.

ಇದನ್ನೂ ಓದಿ:ಯುರೋಪ್‌ ಗೆ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ ರಷ್ಯಾದ ವಿಮಾನಯಾನ ಸಂಸ್ಥೆ ಏರೋಫ್ಲಾಟ್

ಶನಿವಾರದಿಂದ ಭಾರತ ಸರ್ಕಾರವು ತನ್ನ ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಆರಂಭಿಸಿದ್ದು, 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಮುಂಬೈ ಏರ್‌ಪೋರ್ಟ್‌ಗೆ ಶನಿವಾರ ಬಂದಿತ್ತು. ಎರಡನೇ ವಿಮಾನ(250 ಮಂದಿ) ಭಾನುವಾರ ಬೆಳಗಿನ ಜಾವ 2.45ಕ್ಕೆ ದೆಹಲಿಯಲ್ಲಿ ಲ್ಯಾಂಡ್‌ ಆಗಿದೆ. ಭಾನುವಾರ ರಾತ್ರಿ ಮತ್ತೆರಡು ವಿಮಾನಗಳು ಬಂದಿಳಿದಿವೆ.

Advertisement

Udayavani is now on Telegram. Click here to join our channel and stay updated with the latest news.

Next