Advertisement

ಇಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

11:40 PM Apr 30, 2019 | Lakshmi GovindaRaj |

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಧರ್ಮಸ್ಥಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಬುಧವಾರ ಸಂಜೆ 6.48ರ ಗೋಧೂಳಿ ಲಗ್ನ ಮುಹೂರ್ತದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

Advertisement

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಶಿವಾನಂದ ಪಾಟೀಲ್‌, ನಗರಾಭಿವೃದ್ಧಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌, ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯ ಕೆ.ಹರೀಶ್‌ ಕುಮಾರ್‌, ಜಲ ಸಂಪನ್ಮೂಲ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಆಂಧ್ರಪ್ರದೇಶ ಸರಕಾರದ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಂ.ಗಿರಿಜಾ ಶಂಕರ್‌ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಟ ಡಾ| ಶಿವರಾಜ್‌ ಕುಮಾರ್‌ ಭಾಗವಹಿಸಲಿದ್ದಾರೆ ಎಂದು ಕ್ಷೇತ್ರದ ಡಿ. ಹಷೇಂದ್ರಕುಮಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next