Advertisement
ಗುರುವಾರ ಮಲ್ಪೆ ಏಳೂರು ಮೊಗವೀರ ಭವನದ ಮತ್ಸನಿಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಕರಾವಳಿ ಕಾವಲು ಪಡೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ವತಿ ಯಿಂದ ಆಯೋಜಿಸಲಾಗಿದ್ದ ಪೊಲೀಸ್ ನೇಮಕಾತಿ ವಿಶೇಷ ಕಾರ್ಯಾಗಾರ ದಲ್ಲಿ ಅವರು ಮಾತನಾಡಿದರು.
ಔರಾದಕರ್ ಸಮಿತಿಯ ಶಿಫಾರಸುಗಳು ಜಾರಿಗೆ ಬಂದ ಅನಂತರ ವೇತನ ಸೌಲಭ್ಯ ಉತ್ತಮವಾಗಲಿದ್ದು, ಸಿಬಂದಿ ಮತ್ತು ಕುಟುಂಬ ವರ್ಗಕ್ಕೆ ಉಚಿತ ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲಭ್ಯ, ಕ್ವಾಟ್ರಸ್ ಸೌಲಭ್ಯ ಕೂಡ ದೊರೆಯಲಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕೆಎಸ್‌ಆರ್‌ಪಿ ಕಮಾಂಡೆಂಟ್ ಕೃಷ್ಣಪ್ಪ, ಉಡುಪಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪಾರ್ಶ್ವನಾಥ್, ಮಂಗಳೂರು ಕೆಎಸ್‌ಆರ್‌ಪಿ ಕಮಾಂಡೆಂಟ್ ಜನಾರ್ದನ್, ಇಂಟೆಲಿಜೆಂಟ್ ವಿಭಾಗದ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಉಡುಪಿ ಡಿವೈಎಸ್ಪಿ ಜೈಶಂಕರ್ ಉಪಸ್ಥಿತರಿದ್ದರು.
Related Articles
ರಾಜ್ಯದಲ್ಲಿ ಒಟ್ಟು 27,000 ಪೊಲೀಸ್ ಹುದ್ದೆಗಳು ಖಾಲಿ ಇದ್ದು, ಕರಾವಳಿ ಭಾಗದಲ್ಲಿ 1,624 ಪೊಲೀಸ್ ಕಾನ್‌ಸ್ಟೆಬಲ್, 110 ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇವೆ. ಕರಾವಳಿ ಭಾಗದಲ್ಲಿ ಪೊಲೀಸ್ ಇಲಾಖೆಗೆ ಸೇರಬಯಸುವ ಜನರ ಸಂಖ್ಯೆ ಇತ್ತೀಚಿನ 4-5 ವರ್ಷಗಳಲ್ಲಿ ತೀರ ಇಳಿಮುಖಗೊಂಡಿದೆ. ಈ ಭಾಗದ ಯುವಕ ಯುವತಿಯರು, ಇಲಾಖೆಯ ಬಗ್ಗೆ ನಿರಾಸಕ್ತಿ ತೋರುತ್ತಿದ್ದಾರೆ. ಅದು ಸಲ್ಲದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳಲು ಮನಮಾಡಬೇಕು ಎಂದು ಎಡಿಜಿಪಿ ಭಾಸ್ಕರ ರಾವ್ ಹೇಳಿದರು.
Advertisement