Advertisement
ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾಗಿರುವ ಈ ವಿಶೇಷ ಯೋಜನೆಯ ಅಕ್ಕಿಯನ್ನು ಸಮರ್ಪಕವಾಗಿ ಹಾಗೂ ನಿಗದಿತ ಅವ ಧಿಯೊಳಗಾಗಿ ಬಳಕೆ ಮಾಡುವ ಬಗ್ಗೆ ಜಿಲ್ಲೆಗೆ 2373.98 ಕ್ವಿಂಟಲ್ ಅಕ್ಕಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಅಥವಾ ಬೇರಾವುದೇ ರಾಜ್ಯಗಳಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಂಚಿಕೆ ಪಡೆಯುತ್ತಿರಬಾರದು. ಇದನ್ನು ಪರಿಶೀಲಿಸಿ ಖಾತ್ರಿ ಪಡಿಸಲು ಎಲ್ಲ ಫಲಾನುಭವಿಗಳಿಂದಲೂ ಅವರ ಆಧಾರ್ ಸಂಖ್ಯೆಯನ್ನು ಪಡೆದು ಆನ್ ಲೈನ್ ತಂತ್ರಾಂಶದಲ್ಲಿ ಪರಿಶೀಲಿಸಿ ವಿತರಿಸಲಾಗುತ್ತದೆ. ಪ್ರತಿ ಫಲಾನುಭವಿಯ ಆಧಾರ ಸಂಖ್ಯೆ ಪರಿಶೀಲಿಸಿ ಅವರ ಮೊಬೈಲ್‌ಗೆ ಓಟಿಪಿ ಬಂದ ನಂತರ ಅದನ್ನು ದಾಖಲಿಸಿ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ವಿವರಿಸಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ವಲಸಿಗರಿಗೆ ಒದಗಿಸುವ ಸೌಲಭ್ಯಗಳನ್ನು ತಪ್ಪು ಮಾಹಿತಿ ನೀಡಿ ಪಡೆದುಕೊಂಡಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್
52ರಡಿ ಅಂತಹವರಿಗೆ ದಂಡ ಅಥವಾ ದಂಡದ ಜೊತೆಗೆ ಒಂದು ವರ್ಷದಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು. ಜಿಲ್ಲೆಯ ಎಲ್ಲ ಪಟ್ಟಣ ಪ್ರದೇಶದ ಆಯ್ದ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುವುದು ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Articles
ಕ್ಯಾಪ್ಟನ್ ಡಾ|ರಾಜೇಂದ್ರ, ಡಿಸಿ
Advertisement