Advertisement
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಸಿ. ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಶ್ರಯ ಮನೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾ ಣವಾಗುವ 10 ಲಕ್ಷ ರೂ. ವೆಚ್ಚದ ಮನೆಗೆ 100ರಿಂದ 200 ರೂ. ಗೆ ಟನ್ ಮರಳು ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು.
Related Articles
Advertisement
ರಾಜ್ಯದ ಬಹುತೇಕ ಕಡೆ ಒಂದೇ ಪರ್ಮಿಟ್‌ನಲ್ಲಿ ಅನೇಕರು ಕಾನೂನು ಬಾಹಿರವಾಗಿ ಮರಳು ಸಾಗಿಸುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಕಡೆ ಸಭೆಗಳನ್ನು ನಡೆಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದರು. ರಾಜ್ಯದ ಎಲ್ಲ ಕಡೆ ಮರಳಿನ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕಂದಾಯ, ಅರಣ್ಯ, ಗೃಹ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಇಂತಹ ದೂರುಗಳು ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡುತ್ತಿರುವುದಾಗಿ ತಿಳಿಸಿದರು.