Advertisement

ಜೋಶಿ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ

05:20 PM Jan 24, 2022 | Shwetha M |

ಇಂಡಿ: ತಾಲೂಕಿನಾದ್ಯಂತ ಅಂಧರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಲಯನ್ಸ್‌ ಸಂಸ್ಥೆ ವತಿಯಿಂದ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ತಪಾಸಣೆ ಶಿಬಿರಗಳನ್ನು ನಡೆಸಿ ಇಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಹುಬ್ಬಳ್ಳಿಯ ಎಂ.ಎಂ. ಜೋಶಿ ಆಸ್ಪತ್ರೆಯಲ್ಲಿ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿಸಲಾಗುತ್ತದೆ ಎಂದು ಲಯನ್ಸ್‌ ಸಂಸ್ಥೆ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಹೇಳಿದರು.

Advertisement

ಪಟ್ಟಣದ ಲಯನ್ಸ್‌ ಸಂಸ್ಥೆ ವತಿಯಿಂದ ಇಂಡಿಯ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣೆ ನಡೆಸಿ ಎರಡನೇ ಶಿಬಿರದಲ್ಲಿ ಆಯ್ಕೆಯಾದ 20 ಜನರಿಗೆ ಹುಬ್ಬಳ್ಳಿಯ ಎಂ.ಎಂ. ಜೋಶಿ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರನ್ನು ಸ್ವಾಗತಿಸಿ ಮಾತನಾಡಿದ ಅವರು, ಕಳೆದ ವರ್ಷದಲ್ಲಿ ಇಂಡಿ ತಾಲೂಕಿನಲ್ಲಿ ಒಂದು ಸಾವಿರ ಮಂದಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿತ್ತು ಎಂದರು.

ಸಂಸ್ಥೆ ಸಂಸ್ಥಾಪಕ ಶ್ರೀಪತಿಗೌಡ ಪಾಟೀಲ ಮತ್ತು ಕಾರ್ಯದರ್ಶಿ ಎಂ.ಎಸ್‌. ಬಿರಾದಾರ ಮಾತನಾಡಿ, ಕಳೆದ ಇಪ್ಪತ್ತು ವರ್ಷಗಳಲ್ಲಿ ಹತ್ತು ಸಾವಿರ ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ. ಚಿಕಿತ್ಸೆಗೆ ಒಳಗಾದ ಎಲ್ಲರೂ ಉತ್ತಮ ದೃಷ್ಟಿ ಹೊಂದಿದ್ದಾರೆ. ಹುಬ್ಬಳ್ಳಿಯ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ಸಹಕಾರದಿಂದ ಈ ಕಾರ್ಯ ರೂಪಿಸಲಾಗುತ್ತಿದೆ. ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳುವ ರೋಗಿಗಳನ್ನು ಹುಬ್ಬಳ್ಳಿಯ ಜೋಶಿ ಅಸ್ಪತ್ರೆಯ ಸಿಬ್ಬಂದಿ ಬಸ್‌ನಲ್ಲಿ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ನಂತರ ರೋಗಿಗಳನ್ನು ಅವರ ಮನೆಗೆ ಬಿಟ್ಟು ಬರುತ್ತಾರೆ ಎಂದರು.

ಎ.ಬಿ. ಬಿರಾದಾರ, ಡಾ| ಮಲ್ಲಿಕಾರ್ಜುನ ಅಂಕಲಗಿ, ಮಲ್ಲಿಕಾರ್ಜುನ ವಾಲೀಕಾರ, ಲಯನ್ಸ್‌ ಶಾಲೆ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next