Advertisement

ಥಾಣೆ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಉಚಿತ ಪಠ್ಯ ಪುಸ್ತಕ ವಿತರಣೆ

04:39 PM Jul 02, 2019 | Team Udayavani |

ಥಾಣೆ: ರಾಜ್ಯ ಸರಕಾರದ ಸರ್ವ ಶಿಕ್ಷಣ ಅಭಿಯಾನ ಯೋಜನೆಯ ಸಹಕಾರದೊಂದಿಗೆ ನೀಡಲಾದ ಉಚಿತ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮವು ಥಾಣೆಯ ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಜೂ. 17ರಂದು ನಡೆಯಿತು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಆದಿಶಕ್ತಿ ಕನ್ನಡ ಸಂಘ ಹಾಗೂ ಶ್ರೀ ಆದಿಶಕ್ತಿ ಕನ್ನಡ ಶಾಲೆಯ ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು ವಹಿಸಿ ಮಾತನಾಡಿ, ಮಾತೃಭಾಷೆಗೆ ಇರುವ ಶಕ್ತಿ ಅನ್ಯ ಭಾಷೆಗೆ ಇಲ್ಲ. ಶಾಲೆಯಿಂದ ದೊರೆತ ಪಠ್ಯಪುಸ್ತಕವನ್ನು ಉತ್ತಮ ರೀತಿ

ಯಲ್ಲಿ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿ
ಗಳು ಬೆಳೆಯಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರು ಮತ್ತು ಪೋಷಕರ ಪಾತ್ರ ಮಹತ್ತರವಾಗಿದೆ. ಪಾಲಕರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ಶಾಲೆಯ 2018-2019ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಬೆಳಗಿಸಿದ್ದಾರೆ. ಅವರೆಲ್ಲರಿಗೂ ಅಭಿನಂದನೆಗಳು ಎಂದು ನುಡಿದರು.

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯ
ಕ್ರಮ ಪ್ರಾರಂಭಗೊಂಡಿತು. ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಅವರು ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ಶಿಮಂ ತೂರು ಶಂಕರ ಶೆಟ್ಟಿ ಅವರು ಮಾತನಾಡಿ, ಶಾಲಾ ಶೈಕ್ಷಣಿಕ ಪ್ರಗತಿಗೆ ಕಾರಣೀಭೂತರಾದ ಶಾಲಾ ಆಡಳಿತ ಮಂಡಳಿಯ ಕಾರ್ಯ ಅಭಿನಂದನೀಯವಾಗಿದೆ.

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಮುಂಚೂಣಿ ಯಲ್ಲಿರಬೇಕು. ಪರಿಶ್ರಮ, ಶ್ರದ್ಧೆ, ಏಕಾಗ್ರತೆಯಿಂದ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಲು ಸಾಧ್ಯ. ಮಕ್ಕಳು ದೈನಂ
ದಿನ ಪಾಠಗಳನ್ನು ಅಂದಂದೆ ಮನೆಗೆ ತೆರಳಿ ಮನನ ಮಾಡಬೇಕು. ಇದರಿಂದ ಹೆಚ್ಚಿನ ಜ್ಞಾನವನ್ನು ಹೊಂದಲು ಸಾಧ್ಯವಿದೆ. ಹೆತ್ತವರು ಮಕ್ಕಳ ಅಭಿರುಚಿಯನ್ನು ಅರಿತು ಕೊಂಡು ಅವರನ್ನು ಬೆಳೆಸುವ ಜವಾಬ್ದಾರಿಯನ್ನು ಹೊಂದಬೇಕು ಎಂದು ನುಡಿದು 10ನೇ ತರಗತಿಯಲ್ಲಿ ಅಧಿಕ ಅಂಕಗಳೊಂದಿಗೆ ಉತ್ತೀರ್ಣರಾದ ಮಕ್ಕಳನ್ನು ಅಭಿನಂದಿಸಿದರು.

Advertisement

ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ ಶೆಟ್ಟಿ, ಜತೆ ಕೋಶಾಧಿಕಾರಿ ಏಕನಾಥ ಕುಂದರ್‌, ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ಪುಷ್ಪಾ ಆರ್‌. ಕುಂಬ್ಳೆ ಅವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿ ಶರ್ಮಿಳಾ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಪ್ರಕಾಶ್‌ ಚಿಂತಾಮಣಿ ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next