Advertisement
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ (ದಿವ್ಯಾಂಗಜನ್) ಇಲಾಖೆ, ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಫೋರೇಷನ್ ಆಫ್ ಇಂಡಿಯಾ (ಆಲಿಂಕೋ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಕಿ ಫಲಾನುಭವಿಗಳಿಗೆ ಸಾಧನಗಳನ್ನು ವಿತರಿಸಲಾಯಿತು.
Related Articles
Advertisement
ಸರ್ಕಾರಗಳು ಕಾಳಜಿ ವಹಿಸಿವೆ : ಶಾಸಕ ಎನ್. ಮಹೇಶ್ ಮಾತನಾಡಿ, ಸಮಾಜದಲ್ಲಿ ದಿವ್ಯಾಂಗರು ಇತರರಂತೆ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಬೇಕು. ಮಾನವೀಯ ಅಂತಃಕರಣವನ್ನು ದಿವ್ಯಾಂಗರಿಗೂ ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಳಜಿ ವಹಿಸಿವೆ ಎಂದರು.
ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು ಮಾತನಾಡಿ, ಕೇಂದ್ರಸರ್ಕಾರವು ದಿವ್ಯಾಂಗರಿಗೆ ವಿಶಿಷ್ಠ ಗುರುತಿನ ಚೀಟಿ ನೀಡಿ ಶೇ. 5ರಷ್ಟು ಮೀಸಲಾತಿ ಕಲ್ಪಿಸಿದೆ. ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕಲು ಯುಡಿಐಡಿ ಕಾರ್ಡ್ ಒದಗಿಸಿದೆ. ಪ್ರತಿಯೊಬ್ಬರೂ ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮನೆ ಬಾಗಿಲಿಗೆ ಸಲಕರಣೆ: ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಜಿಲ್ಲೆಯ ದಿವ್ಯಾಂಗರಿಗೆ ಸಾಧನ, ಸಲಕರಣೆಗಳನ್ನು ವಿತರಿಸಲು ನಡೆದ ಮೊದಲ ಕಾರ್ಯಕ್ರಮದಲ್ಲಿ 1500 ಮಂದಿಗೆ ವಿತರಿಸಿ ಶೇ. 92ರಷ್ಟು ಪ್ರಗತಿ ಸಾಧಿಸಿದ್ದು, ಬಾಕಿ ಉಳಿದ ದಿವ್ಯಾಂಗರಿಗೆ ಇಂದು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಯಾವುದೇ ವಿಶೇಷಚೇತನರು ಸಾಧನ, ಸಲಕರಣೆಯಿಂದ ವಂಚಿತರಾಗಿದ್ದರೆ, ಅವರನ್ನು ನೋಂದಣಿ ಮಾಡಿಸಿ ವೈದ್ಯಕೀಯ ತಪಾಸಣೆ ನಡೆಸಿ ಅವಶ್ಯ ಸಲಕರಣೆಗಳನ್ನು ಅವರವರ ಮನೆಗಳಿಗೆ ತಲುಪಿಸಲಾಗುವುದು ಎಂದರು.
ಗಣ್ಯರು ದಿವ್ಯಾಂಗರಿಗೆ ಸಾಧನ, ಸಲಕರಣೆಗಳನ್ನು ವಿತರಿಸಿದರು. ನಗರಸಭೆ ಅದ್ಯಕ್ಷೆ ಸಿ.ಎಂ. ಆಶಾ, ಜಿ.ಪಂ. ಸಿಇಒ ಕೆ.ಎಂ. ಗಾಯತ್ರಿ, ಎಸ್‌ಪಿ ಟಿ.ಪಿ. ಶಿವಕುಮಾರ್, ಉಪವಿಭಾಗಾಧಿಕಾರಿ ಗೀತಾಹುಡೇದ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ.ವಿಶ್ವೇಶ್ವರಯ್ಯ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ದೀಪಾ, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಆಲಿಂಕೋ ಸಂಸ್ಥೆಯ ಅಧಿಕಾರಿಗಳು ಇದ್ದರು.