Advertisement

ಮುಕ್ತ ವ್ಯಾಪಾರ ಒಪ್ಪಂದ ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ : ಸಿದ್ದರಾಮಯ್ಯ ಟ್ವೀಟ್

12:13 PM Oct 23, 2019 | Suhan S |

ಬೆಂಗಳೂರು:  ಮಾಜಿ ಸಿ.ಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರದ ವಿರುದ್ದ ಗುಡುಗಿದ್ದಾರೆ.

Advertisement

ಪ್ರಾದೇಶಿಕ ಆರ್ಥಿಕದಡಿಯಲ್ಲಿ ನಡೆಯಲಿರುವ ಮುಕ್ತ ವ್ಯಾಪಾರ ಒಪ್ಪಂದ ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ ಕೇಂದ್ರ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣ ಶಾಸನ ಎಂದು ಮಾಜಿ ಸಿ.ಎಂ ಹಾಗೂ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ‌ ಕೇಂದ್ರದ ವಿರುದ್ದ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.

ಸರಣಿ ಟ್ವೀಟ್ ಮಾಡಿದ ಅವರು ಸುಮಾರು10 ಕೋಟಿ ರೈತರ ಬದುಕು ಹೈನುಗಾರಿಕೆಯನ್ನು ಅವಲಂಬಿಸಿದೆ.ಕರ್ನಾಟಕದಲ್ಲಿಯೇ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನ್ಯೂಜಿಲೆಂಡ್, ಆಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ ಆರ್ .ಸಿ.ಇ.ಪಿ ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ನಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಎಫ್.ಟಿ.ಎ ವಿರೋಧಿಸಲು ಕರೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಬೇಕೆಂದು ಪಕ್ಷದ ಕಾರ್ಯಕರ್ತರಿಗೆ ಟ್ವೀಟ್ ಮೂಲಕ ಕರೆ ಕೊಟ್ಟಿದ್ದಾರೆ.

ಯುಪಿಎ ಸರ್ಕಾರ ಆರ್ .ಸಿ.ಇ.ಪಿ ಮಾತುಕತೆಯಲ್ಲಿ ಭಾಗಿಯಾಗಿದ್ದು ನಿಜ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತ ಕಾಪಾಡಲು ಕೆಲವು ಬದಲಾವಣೆಗಳನ್ನು ಬಯಸಿದ್ದರು. ಆದರೆ ನರೇಂದ್ರ ಮೋದಿ ಅವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ. ಎಲ್ಲಿದೆ ಪಾರದರ್ಶಕತೆ ಎಂದು ಪ್ರಶ್ನೆ ಹಾಕಿದರು.

Advertisement

 

 

Advertisement

Udayavani is now on Telegram. Click here to join our channel and stay updated with the latest news.

Next