Advertisement

ಕ್ಷಯ ರೋಗಿಗಳನ್ನು ಪ್ರೀತಿಯಿಂದ ಕಾಣಿ: ಡಾ|ಉಷಾ

05:25 PM Jul 13, 2018 | Team Udayavani |

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕ್ಷಯರೋಗ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇಂದ್ರ ಕಾರಾಗೃಹ ಆಶ್ರಯದಲ್ಲಿ ನಡೆಯಿತು. ಬೆಳಗಾವಿ ಜೆಎನ್‌ಎಂಸಿ ವೈದ್ಯಾಧಿಕಾರಿ ಡಾ| ಉಷಾ ವಾಸನಕರ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ಶೈಲಜಾ ತಮ್ಮಣ್ಣವರ, ಜಿಲ್ಲಾ ಆಸ್ಪತ್ರೆ ವೈದ್ಯಾ ಧಿಕಾರಿ ಡಾ| ನಾಗಲೇಕರ, ಡಾ| ಜಲಜಾಕ್ಷಿ ಹಾಗೂ ಡಾ| ಮೊಬಿನಾ ಕಾರಾಗೃಹವಾಸಿಗಳಿಗೆ ಕ್ಷಯರೋಗ ಕುರಿತು ಮಾಹಿತಿ ನೀಡಿದರು.

Advertisement

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ| ಉಷಾವಾಸನಕರ, ಕ್ಷಯರೋಗ ಒಂದು ಗುಣಪಡಿಸಬಹುದಾದ ರೋಗವಾಗಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣಮುಖರಾಗಬಹುದು. ಕ್ಷಯರೋಗಿಗಳನ್ನು ಪ್ರೀತಿಯಿಂದ ಕಾಣಬೇಕು. ಕ್ಷಯರೋಗಿಗಳ ಸರ್ಕಾರ ವತಿಯಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ತಾವೆಲ್ಲ ಬಿಡುಗಡೆ ಹೊಂದಿದ ನಂತರ ಸಮಾಜದಲ್ಲಿ ಹಾಗೂ ತಮ್ಮ ಕುಟುಂಬ ವರ್ಗದವರಿಗೆ ರೋಗದ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸಹಾಯಕ ಅಧೀಕ್ಷಕ ಬಸವರಾಜ ಮೂಲಿಮನಿ ಮಾತನಾಡಿ, ಯಾವುದೇ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಹಿಂದಿನ ಕಾಲದಲ್ಲಿ ಕ್ಷಯರೋಗ ಒಂದು ಭಯಾನಕ ರೋಗವಾಗಿತ್ತು. ಆದರೆ ಇಂದು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದಾದ ರೋಗವಾಗಿದೆ. ರೋಗ ಬರದಂತೆ ಮನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕಾರಾಗೃಹದಲ್ಲಿ ತಾವು ಧ್ಯಾನ, ಯೋಗ, ಪ್ರಾರ್ಥನೆ ಓದುವುದು ಮುಂತಾದ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next