Advertisement

ರೇಬೀಸ್ ರೋಗಕ್ಕೆ ಉಚಿತ ಲಸಿಕೆ : ಸಚಿವ ಪ್ರಭು ಚವ್ಹಾಣ್

06:04 PM Sep 27, 2021 | Team Udayavani |

ಬೆಂಗಳೂರು: ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲ ಪಶು ಆಸ್ಪತ್ರೆಗಳಲ್ಲಿ ಉಚಿತವಾಗಿ ನಾಯಿಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ವಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಜಾಗತಿಕವಾಗಿ ರೇಬೀಸ್ ರೋಗದ ನಿರ್ಮೂಲನೆಗಾಗಿ ಜಾಗೃತಿ ಮೂಡಿಸಲು, ಪ್ರತಿ ವರ್ಷ ಸೆಪ್ಟಂಬರ್ 28 ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರಿಗೆ ರೇಬೀಸ್ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಉಚಿತ ಲಸಿಕೆ ಹಾಕುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯಾದ್ಯಂತ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೀದರ್ ಪಾಲಿಕ್ಲಿನಿಕ್ ನಲ್ಲಿ  ಸಚಿವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆಪ್ಟೆಂಬರ್ 28 ರಿಂದ 30ರ ವರೆಗೆ 3 ದಿನಗಳ ಕಾಲ ಉಚಿತ ಲಸಿಕೆ ನೀಡಲಾಗುತ್ತದೆ. ಮನೆಯಲ್ಲಿನ ಮುದ್ದು ಪ್ರಾಣಿಗಳ ಎಂದು ಪರಿಗಣಿಸ್ಪಡುವ ನಾಯಿಗಳ ಆರೋಗ್ಯದ ದೃಷ್ಟಿಯಿಂದ ನಿಮ್ಮ ಹತ್ತಿರದ ಪಶು ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಹಾಕಿಸಿ ಎಂದು ಸಚಿವರ ಸಾರ್ವಜನಿಕರಲ್ಲಿ ಮನವಿಮಾಡಿದ್ದಾರೆ. ಪಶುವೈದ್ಯಾಧಿಕಾರಿಗಳು ತಮ್ಮ ತಮ್ಮ ವ್ಯಪ್ತಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನಮ್ಮ ಭಾರತ್ ಬಂದ್ ಯಶಸ್ವಿಯಾಗಿದೆ, ರೈತರ ಪೂರ್ಣ ಬೆಂಬಲ ಸಿಕ್ಕಿದೆ: ರಾಕೇಶ್ ಟಿಕಾಯತ್

ರೇಬೀಸ್ ಇತರೆ ಪ್ರಾಣಿಗಳಿಗೂ ಹರಡಬಲ್ಲದು:

Advertisement

ರೇಬೀಸ್‌ನಿಂದ ನರಳುತ್ತಿರುವ ಪ್ರಾಣಿಯು ನಮ್ಮನ್ನು ಕಚ್ಚಿದಾಗ/ ನೆಕ್ಕಿದಾಗ ಶರೀರದೊಳಗೆ ರೇಬೀಸ್ ವೈರಾಣು ಪ್ರವೇಶಿಸಿ, ರೇಬೀಸ್ ರೋಗ ಉಂಟು ಮಾಡುತ್ತದೆ.. ರೇಬೀಸ್‌ನಿಂದ ನರಳುತ್ತಿರುವ ಪ್ರಾಣಿಯ ಜೊಲ್ಲಿನಿಂದ ರೇಬೀಸ್ ವೈರಾಣು ಇತರೆ ಪ್ರಾಣಿಗಳಿಗೆ ಹರಡುತ್ತದೆ. ನಾಯಿ, ಬೆಕ್ಕು, ಕುರಿ,ಮೇಕೆ, ಹಸು,ಎಮ್ಮೆ, ಕೋತಿ, ತೋಳ, ನರಿ, ಕರಡಿ, ಮುಂಗುಸಿ, ಹಂದಿ, ಕತ್ತೆ, ಕುದುರೆ ಮತ್ತು ಒಂಟೆಗಳಿಂದ ರೇಬೀಸ್ ಹರಡುತ್ತದೆ. ಭಾರತದಲ್ಲಿ ಬಹುತೇಕ ಜನರಿಗೆ ಹುಚ್ಚುನಾಯಿ ಕಡಿತದಿಂದ ರೇಬೀಸ್ ಹರಡುತ್ತದೆ.

ರೇಬೀಸ್‌ನ ಲಕ್ಷಣಗಳು:

ಉಗ್ರ ಹುಚ್ಚು: ಜೊಲ್ಲು ಸುರಿಸುವಿಕೆ, ಎಲ್ಲರ ಮೇಲೆ ಏರಿಹೋಗಿ ಕಚ್ಚಲು ಪ್ರಯತ್ನಿಸುವುದು, ಕರೆಗೆ ಪ್ರತಿಕ್ರಿಯೆ ನೀಡದಿರುವುದು, ಕ್ರಮೇಣ ಧ್ವನಿಯಲ್ಲಿ ವ್ಯತ್ಯಾಸ, ಗೊಂದಲ ಪಡುವುದು, ಪಾರ್ಶ್ವವಾಯು ಕಾಣಿಸಿ  8-10 ದಿನಗಳಲ್ಲಿ ಸಾವು ಸಂಭವಿಸುವುದು.

ಮಂದ ಹುಚ್ಚು: ಮೂಲೆಯಲ್ಲಿ ಮುದುಡಿ ಕೂತಿರುವುದು, ಊಟ ಮಾಡದಿರುವುದು, ಗಂಟಲು ಊದುವಿಕೆ, ತೆರೆದ ಬಾಯಿಯನ್ನು ಮುಚ್ಚಲಾಗದೆ ಸಾವನ್ನಪ್ಪುವುದು.

ಹುಚ್ಚು ನಾಯಿ ಕಚ್ಚಿದರೆ ಏನು ಮಾಡಬೇಕು?:

ಕಚ್ಚಿದ ಗಾಯವನ್ನು ಸಾಬೂನು ಹಾಗೂ ನೀರಿನಿಂದ ಚೆನ್ನಾಗಿ ತೊಳೆಯಬೇಕು, ಕಚ್ಚಿದ ಗಾಯಕ್ಕೆ ಡೆಟಾಲ್/ ಸಾವಲಾನ್/ ಪೊವೀಡೀನ್ ಐಯೋಡೀನ್ ನಂತಹ ರೋಗ ನಿರೋಧಕ ಔಷಧಿಯನ್ನು ಹಚ್ಚಬೇಕು, ಯಾವುದೇ ಕಾರಣಕ್ಕೂ ಗಾಯದ ಭಾಗವನ್ನು ಬ್ಯಾಂಡೇಜ್/ಬಟ್ಟೆಯಿಂದ ಕಟ್ಟಬಾರದು. ರಕ್ತ ಬಂದಂತಹ ಗಾಯವಾದರೆ, ಕೂಡಲೇ ರೇಬೀಸ್ ಇಮ್ಯೂನೋಗ್ಲೋಬುಲಿನ್ ಚುಚ್ಚುಮದ್ದನ್ನು ಗಾಯಕ್ಕೆ ಕೊಡಿಸಬೇಕು.

ಹುಚ್ಚು ನಾಯಿ ಕಡಿತಕ್ಕೊಳಗಾದ ಮನುಷ್ಯ ಅಥವಾ ಜಾನುವಾರುಗಳಿಗೆ 0,3,7,14,28 ನೇ ದಿನಗಳಂದು ತಪ್ಪದೇ ರೇಬೀಸ್ ಲಸಿಕೆಯನ್ನು ಕೊಡಬೇಕು.

Advertisement

Udayavani is now on Telegram. Click here to join our channel and stay updated with the latest news.

Next