Advertisement

ಬ್ಯಾಟರಾಯನಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ‘ಸ್ವಾತಂತ್ರ್ಯ ನಡಿಗೆ’

11:57 AM Aug 11, 2022 | Team Udayavani |

ಬೆಂಗಳೂರು: ಸ್ವಾತಂತ್ರ್ಯೋತ್ಸವದ 75 ನೇ ಸಂಭ್ರಮಾಚರಣೆ ಅಂಗವಾಗಿ ದೇಶಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿರುವ “ಸ್ವಾತಂತ್ರ್ಯ ನಡಿಗೆ” ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ಮುಖಂಡರು ಭಾಗಿಯಾಗಿ ಗಮನ ಸೆಳೆದರು.

Advertisement

ಶಾಸಕ ಕೃಷ್ಣ ಭೈರೇಗೌಡ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಪ್ರದೇಶಗಳಲ್ಲಿ ತಿರಂಗಾ ನಡಿಗೆ ವೈಭವದಿಂದ ಸಾಗಿತು.

ಬುಧವಾರ ಥಣಿಸಂದ್ರಕ್ಕೆ ಕಾಂಗ್ರೆಸ್ ನಡಿಗೆ ಜಾಥ ಆಗಮಿಸಿದಾಗ ಕೃಷ್ಣ ಭೈರೇಗೌಡ ಅವರೊಂದಿಗೆ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯ ನಾಸೀರ್ ಅಹ್ಮದ್, ಖಾನಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಂಜಲಿ ನಿಂಬಾಳ್ಕರ್, ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ, ಮೀನಾಕ್ಷಿ ಕೃಷ್ಣಭೈರೇಗೌಡ ಮತ್ತಿತರರು ಕ್ಷೇತ್ರದಲ್ಲಿ ಸ್ವಾತಂತ್ರ್ಯ ನಡಿಗೆಯಲ್ಲಿ ಹೆಜ್ಜೆಹಾಕಿ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಸೇನಾನಿಗಳಿಗೆ ಗೌರವ ಸಲ್ಲಿಸಿದರು.

ಇದನ್ನೂ ಓದಿ:ಚಿಕ್ಕಮಗಳೂರು ಎಸ್ ಪಿ ಗೆ ಭಾವಪೂರ್ಣ ಬೀಳ್ಕೊಡುಗೆ: ಹೂಮಳೆಗೈದ ಸಿಬ್ಬಂದಿ

ಈ ಕುರಿತು ಕೃಷ್ಣ ಭೈರೇಗೌಡ ಟ್ವೀಟ್ ಮಾಡಿ, ಸ್ವಾತಂತ್ರ್ಯದ ನಡಿಗೆಯಲ್ಲಿ ಊಹೆಗೂ ನಿಲುಕದ ಸಂಭ್ರಮ ಕಂಡು ಬಂದಿದೆ. ನಿರೀಕ್ಷೆಗೂ ಮೀರಿದ ಸ್ಪಂದನೆ. ದೇಶಭಕ್ತಿಯ ಸಂದೇಶ ಸಾರುವ ಜೊತೆಗೆ ಸ್ವಾತಂತ್ರ್ಯ ಮರಳಿ ಪಡೆಯುವ ಕುರಿತು ಜಾಗೃತಿ ಮೂಡಿಸಿದ ಸ್ವಾತಂತ್ರ್ಯ ನಡಿಗೆ ಸಫಲವಾಗಿದೆ ಎಂದಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next