ಗುವಾಹಟಿ: ಅಸ್ಸಾಂನಲ್ಲಿ ನಡೆಯುವ ಬಾಲ್ಯವಿವಾಹಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಎರಡನೇ ಹಂತದ ಕಾರ್ಯಾಚರಣೆಯಲ್ಲಿ ಸುಮಾರು 800 ಕ್ಕೂ ಹೆಚ್ಚು ಜನರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಮೊದಲ ಸುತ್ತಿನ ಕಾರ್ಯಾಚರಣೆ ನಡೆಸಿದ ತಂಡ ಇಂದು ಬೆಳಿಗ್ಗೆ ಮತ್ತೆ ಎರಡನೇ ಸುತ್ತಿನ ಕಾರ್ಯಾಚರಣೆ ನಡೆಸಿ ಸುಮಾರು 800 ಮಂದಿಯನ್ನು ಅಸ್ಸಾಂ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಟ್ವಿಟರ್ ಖಾತೆ x ನಲ್ಲಿ ಹೇಳಿಕೊಂಡಿದ್ದಾರೆ.
ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ (ಪೋಕ್ಸೊ) ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಅಡಿಯಲ್ಲಿ 4,037 ಪ್ರಕರಣಗಳು ದಾಖಲಾಗಿದ್ದು, ಒಟ್ಟು 3047 ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ISIS; ಬಂಧಿತ ಉಗ್ರರ ಹುಬ್ಬಳ್ಳಿ ಲಿಂಕ್ ಬಗ್ಗೆ ಖಚಿತ ಮಾಹಿತಿಯಿಲ್ಲ: ರೇಣುಕಾ ಸುಕುಮಾರ್