Advertisement

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗವಿಲ್ಲ

07:29 AM Oct 23, 2019 | Mithun PG |

ಗುವಾಹಟಿ: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ  ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.

Advertisement

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ.

2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ಈ ಮಾಹಿತಿಯನ್ನು ಅಧಿಕೃತಗೊಳಿಸಿದ್ದು, 2021 ಜನವರಿಯಿಂದ ಜಾರಿಗೆ ಬರುವಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರನ್ನು ಸರ್ಕಾರಿ ಉದ್ಯೋಗಕ್ಕೆ ಪರಿಗಣಿಸಲಾಗುವುದಿಲ್ಲ, ಜನಸಂಖ್ಯಾ ನಿಯಂತ್ರಣ ಇದರ ಹಿಂದಿರುವ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.

ಇದೇ ವೇಳೆ  ಹೊಸ ಭೂಕಾಯ್ದೆಯನ್ನು ಕೂಡ ಜಾರಿಗೆ ತರಲಾಗಿದ್ದು ಭೂರಹಿತ ರೈತರಿಗೆ ಜಮೀನನ್ನು ಒದಗಿಸುವುದರ ಜೊತೆಗೆ ಮನೆ ನಿರ್ಮಿಸಲು ಕೂಡ ಅನುವು ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next