Advertisement

ಸಹಕಾರ ಕ್ಷೇತ್ರದಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂ. ರಾಜಸ್ವ ಸಂಗ್ರಹ

07:51 PM Oct 27, 2021 | Team Udayavani |

ಚಿತ್ರದುರ್ಗ: ಸಹಕಾರ ಕ್ಷೇತ್ರದಿಂದ ಪ್ರತಿ ದಿನ ರಾಜ್ಯದ ಬೊಕ್ಕಸಕ್ಕೆ ಒಂದು ಕೋಟಿಗೂ ಅಧಿ ಕ ರಾಜಸ್ವ ನೀಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಬಿ.ಎಚ್‌. ಕೃಷ್ಣಾರೆಡ್ಡಿ ತಿಳಿಸಿದರು.

Advertisement

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 5300ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ಹಾಗೂ 1300ಕ್ಕೂ ಹೆಚ್ಚು ಇ-ಸ್ಟಾಂಪಿಂಗ್‌ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಒಂದು ಕೋಟಿಗೂ ಹೆಚ್ಚಿನ ಪ್ರಮಾಣದ ರಾಜಸ್ವ ದೊರೆಯುತ್ತಿದೆ ಎಂದರು. ರಾಜ್ಯದ ಸೌಹಾರ್ದ ಸಹಕಾರಿ ಕ್ಷೇತ್ರದಲ್ಲಿ 50 ಲಕ್ಷಕ್ಕೂ ಹೆಚ್ಚು ಸದಸ್ಯರು ತೊಡಗಿಕೊಂಡಿದ್ದಾರೆ. 60 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಲಾಗಿದೆ.

750 ಕೋಟಿ ರೂ.ಗಳ ಪಾಲು ಬಂಡವಾಳ, 15,000 ಕೋಟಿ ರೂ.ಗಳ ಠೇವಣಿ, 1000 ಕೋಟಿ ರೂ.ಗಳ ನಿಧಿ ಗಳು, 12,000 ಕೋಟಿ ರೂ.ಗಳ ಸಾಲ, 18,000 ಕೋಟಿ ರೂ.ಗಳ ದುಡಿಯುವ ಬಂಡವಾಳ, 230 ಕೋಟಿ ರೂ.ಗಳ ಲಾಭದ ಹೆಗ್ಗಳಿಕೆ ಈ ಕ್ಷೇತ್ರದ್ದಾಗಿದೆ ಎಂದು ವಿವರಿಸಿದರು. ಆದಾಯ ತೆರಿಗೆ ಕಾಯ್ದೆ ಅನ್ವಯ ಸಹಕಾರ ಸಂಸ್ಥೆಗಳಿಗೆ ತೆರಿಗೆ ವಿನಾಯಿತಿ ಇದ್ದರೂ ಬೇರೆ ಬೇರೆ ಕಾರಣಗಳಿಂದ ಸಹಕಾರ ಸಂಸ್ಥೆಗಳಿಗೆ ತೆರಿಗೆ ನೋಟಿಸ್‌ ನೀಡಲಾಗುತ್ತಿದೆ. ಈ ಕುರಿತು ಕೇಂದ್ರ ಸಹಕಾರ ಸಚಿವರು, ಹಣಕಾಸು ಸಚಿವರು ಹಾಗೂ ಸಿಬಿಡಿಟಿ ಅಧ್ಯಕ್ಷರನ್ನು ಭೇಟಿ ಮಾಡಿ ಸೂಕ್ತ ಪರಿಹಾರಕ್ಕೆ ಪ್ರಯತ್ನ ನಡೆಸಲಾಗಿದೆ. ಆದಾಯ ತೆರಿಗೆ ಮುಖ್ಯ ಆಯುಕ್ತರ ಸಭೆ ನಡೆಸಿ ಸಹಕಾರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ
ಚರ್ಚಿಸಲಾಗಿದೆ ಎಂದರು.

ಹಣ ಹೂಡಿಕೆ ಮಾಡಿರುವ ಠೇವಣಿದಾರರಿಗೆ ಹಣ ಹಿಂದಿರುಗಿಸುವಲ್ಲಿ ವಿಫಲವಾಗಿರುವ ಸಹಕಾರಿ ಸಂಘಗಳ ವಿರುದ್ಧ ಠೇವಣಿದಾರರಿಂದ ದೂರು ದಾಖಲಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಉನ್ನತ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರೂಪಿಸಲಾಗಿದೆ. ಆ ಮೂಲಕ ಠೇವಣಿದಾರರಿಗೆ ಹಣ ಕೊಡಿಸುವ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಸಂಯುಕ್ತ ಸಹಕಾರಿಯ ಎಲ್ಲ ನಿರ್ದೇಶಕರು ಮುತುವರ್ಜಿ
ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಇಫೂRà ಹಾಗೂ ಎನ್‌ಸಿಯುಐ ಸಂಯುಕ್ತಾಶ್ರಯದಲ್ಲಿ ನವದೆಹಲಿಯಲ್ಲಿ ಸಮೃದ್ಧಿ ಬೃಹತ್‌ ಸಮಾವೇಶ ನಡೆಸಲಾಯಿತು. ಸಹಕಾರ ಸಚಿವ ಅಮಿತ್‌ ಶಾ, ಸಹಕಾರಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಂಕಲ್ಪ ಮಾಡುವಂತೆ ತಿಳಿಸಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಸಚಿವಾಲಯ ಆರಂಭಿಸಲಾಗಿದೆ. ಬೆಂಗಳೂರಿನಲ್ಲಿ ಸಂಯುಕ್ತ ಸಹಕಾರಿ ಕೇಂದ್ರ ಕಚೇರಿ ಕಟ್ಟಡ ನಿರ್ಮಿಸಲಾಗಿದೆ. ಇದರ ಉದ್ಘಾಟನೆಗೆ ಸಚಿವ ಅಮಿತ್‌ ಶಾ ಅವರನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.

Advertisement

ಸಹಕಾರಿ ಕಾಯ್ದೆಗಳಿಂದ ಸಹಕಾರಿ ಕ್ಷೇತ್ರಕ್ಕೆ ಅನೇಕ ರೀತಿಯ ತೊಂದರೆ ಉಂಟಾಗುತ್ತಿತ್ತು. ಈ ಕುರಿತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಯಿತು. ಸಹಕಾರಿ ಕಾಯ್ದೆಗಳಿಗೆ ತಿದ್ದುಪಡಿ ತಂದು ಹಲವು ಸಮಸ್ಯೆಗಳನ್ನು ನಿವಾರಿಸಲಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಹಾಗೂ
ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಯುಕ್ತ ಸಹಕಾರಿ ನಿರ್ದೇಶಕ ಹಾಗೂ ಮರ್ಚೆಂಟ್ಸ್‌ ಸೌಹಾರ್ದ ಸಹಕಾರ ಬ್ಯಾಂಕ್‌ ಅಧ್ಯಕ್ಷ ಎನ್‌.ಆರ್‌. ಲಕ್ಷ್ಮೀಕಾಂತ ರೆಡ್ಡಿ, ಸಹಕಾರಿಗಳಾದ ಈಶ್ವರಪ್ಪ, ನಾರಾಯಣ ಹೆಗಡೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next