Advertisement

ಧಾರ್ಮಿಕ ಕ್ಷೇತ್ರಗಳಿಂದ ಸೌಹಾರ್ದಕ್ಕೆ ನಾಂದಿ: ಪಾಟೀಲ

02:43 PM Aug 02, 2017 | Team Udayavani |

ಸೇಡಂ: ಧಾರ್ಮಿಕ ಕ್ಷೇತ್ರಗಳು ಮಾಡುವ ಕಾರ್ಯಗಳಿಂದಾಗಿ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

Advertisement

ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರ್ಮಿಸಿದ ಯಾತ್ರಿ ನಿವಾಸ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ದೇಶಕ್ಕೆ ಅಭಿವೃದ್ಧಿ, ಸಮೃದ್ಧಿಯೊಂದಿಗೆ ಅಧ್ಯಾತ್ಮಿಕತೆ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೆಜ್ಜೆ ಹಾಕುವುದರಿಂದ ದೇಶದ ಶ್ರೀಮಂತ ಸಂಸ್ಕೃತಿ ಉಳಿಸುವುದು ಸಾಧ್ಯವಾಗುತ್ತದೆ ಎಂದರು.

ಪ್ರವಾಸಿಗರ ನೆರವಿಗಾಗಿ ಪ್ರವಾಸಿ ಮಂದಿರ ನಿರ್ಮಿಸಲಾಗಿದೆ. ಅದರಂತೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಪಟ್ಟಣದೆಲ್ಲೆಡೆ ಯುಜಿಡಿ ಕಾಮಗಾರಿ ಕೈಗೊಳ್ಳಲಾಗಿದೆ. ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈಗಾಗಲೇ ಹೈಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ 1500 ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಲಾಗುತ್ತಿದೆ. ಬಡವರ ಮಕ್ಕಳು ಉನ್ನತ ವ್ಯಾಸಂಗ ಮಾಡಲು ಅನುಕೂಲವಾಗುವಂತೆ 371ನೇ ಕಲಂ ಜಾರಿಗೊಳಿಸಲಾಗಿದೆ
ಎಂದು ಹೇಳಿದರು.

ಭಾಲ್ಕಿ ಮಠದ ಗುರುಬಸವ ಪಟ್ಟದೇವರು, ಶ್ರಿ ಕೊತ್ತಲ ಬಸವೇಶ್ವರ ಸಂಸ್ಥಾನದ ಸದಾಶಿವ ಸ್ವಾಮೀಜಿ. ನಗರ ಯೋಜನಾ ಪ್ರಾ ಕಾರದ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ, ಹಾಪಕಾಮ್ಸ್‌ ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ, 
ಮಾಜಿ ಶಾಸಕ ಡಾ| ನಾಗರೆಡ್ಡಿ ಪಾಟೀಲ, ಅಶೋಕ ಮಹಾಡಿಕ ವೇದಿಕೆಯಲ್ಲಿದ್ದರು. ರಾಚಣ್ಣ ಬಳಗಾರ ನಿರೂಪಿಸಿದರು. ನಾಗೇಂದ್ರಪ್ಪ ಡೊಳ್ಳಾ ಸ್ವಾಗತಿಸಿದರು. ಅನಂತಯ್ಯ ಮುಸ್ತಾಜರ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next