Advertisement

ಇಂದಿನಿಂದ ತವರು ಜಿಲ್ಲೆಯಲ್ಲೇ ಸಿಎಂ ಸಿದ್ದರಾಮಯ್ಯ ಠಿಕಾಣಿ

11:56 PM Aug 26, 2023 | Team Udayavani |

ಬೆಂಗಳೂರು: ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆ ಇದೇ ತಿಂಗಳು 30ರಂದು ಉದ್ಘಾಟನೆಗೊಳ್ಳುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಹಿತ ಅರ್ಧ ಡಜನ್‌ ಸಚಿವರು ಮೈಸೂರಿನಲ್ಲಿ ಮೊಕ್ಕಾಂ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

Advertisement

ಗೃಹಲಕ್ಷ್ಮೀ ಯೋಜನೆ ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳ ಪೈಕಿ ಮಹತ್ವದ್ದಾಗಿದೆ. ಅತಿ ಹೆಚ್ಚು ಫ‌ಲಾನುಭವಿಗಳು ಮಾತ್ರವಲ್ಲ, ಯೋಜನಾ ವೆಚ್ಚವೂ ಎಲ್ಲದಕ್ಕಿಂತ ಹೆಚ್ಚಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಗೃಹಲಕ್ಷ್ಮೀ ಜಾರಿಗೆ ಕಾಂಗ್ರೆಸ್‌ ನಿರ್ಧರಿಸಿದ್ದು, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಆಹ್ವಾನಿಸಲಾಗಿದೆ. ತಮ್ಮ ತವರು ಜಿಲ್ಲೆಯಲ್ಲೇ ಈ ಕಾರ್ಯಕ್ರಮ ನಡೆಯುತ್ತಿರುವುದರಿಂದ ಸಿದ್ದರಾಮಯ್ಯನವರೇ ಮುತುವರ್ಜಿಯಿಂದ ಮೇಲ್ವಿ ಚಾರಣೆ ನಡೆಸಲು ನಿರ್ಧರಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಈಗಾಗಲೇ ಮೈಸೂರಿಗೆ ಭೇಟಿ ನೀಡಿ ಬಂದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಮೈಸೂರಿನಲ್ಲೇ ಇದ್ದಾರೆ.

ಮೈಸೂರು, ಚಾಮರಾಜನಗರ ಉಸ್ತುವಾರಿ ಸಚಿವರಾದ ಡಾ| ಎಚ್‌.ಸಿ.ಮಹದೇವಪ್ಪ, ವೆಂಕಟೇಶ್‌ ಕೂಡ ತಮಗೆ ವಹಿಸಿದ ಜವಾಬ್ದಾರಿಯಲ್ಲಿ ನಿರತರಾಗಿದ್ದು, ಸಿಎಂ ಜತೆ ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕೂಡ ಇದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿ ಸಿದ ಬಳಿಕ ಸಿದ್ದರಾಮಯ್ಯ ಮೈಸೂರು ಭಾಗದಲ್ಲಿ ನಡೆ ಸುವ ದೀರ್ಘ‌ ಪ್ರವಾಸ ಇದಾಗಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next