Advertisement
ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ಜನರನ್ನು ಸೇರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ಆಗಿರುವುದರಿಂದ ಉದ್ಘಾಟನೆಗೆ ಹೆಚ್ಚಿನ ಮಹತ್ವ ಬಂದಿದೆ.
Related Articles
Advertisement
ಯೋಜನೆಯ ಆಯ್ದ ಫಲಾನುಭವಿಗಳನ್ನು ಪಂಚಾಯತ್ ಮಟ್ಟದಲ್ಲಿ ಆಯ್ಕೆ ಮಾಡಿ ರಾಷ್ಟ್ರೀಯ ನಾಯಕರ ಜತೆ ನೇರವಾಗಿ ಸಂವಾದ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಯೋಜನೆಯ ಫಲಾನುಭವಿಗಳು ಮನೆಯ ಮುಂದೆ “ನಾ ನಾಯಕಿ, ಗೃಹಲಕ್ಷ್ಮಿ’ ಎಂದು ರಂಗೋಲಿ ಹಾಕುವ ಕಾರ್ಯಕ್ರಮವೂ ಇದೆ.
ಚಾಮುಂಡೇಶ್ವರಿಗೆ ಕಾಣಿಕೆ ಸಮರ್ಪಣೆ
ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ತಲಾ ಎರಡು ಸಾವಿರ ರೂ. ಕಾಣಿಕೆ ಸಮರ್ಪಿಸಿದರು.
ರಾಜ್ಯಾದ್ಯಂತ ನೇರಪ್ರಸಾರ
ರಾಜ್ಯಾದ್ಯಂತ 10,400 ಸ್ಥಳಗಳು, 6 ಸಾವಿರಕ್ಕೂ ಹೆಚ್ಚು ಗ್ರಾ.ಪಂ.ಗಳು, ವಾರ್ಡ್‌ಗಳಲ್ಲಿ ಒಂದು ಕಡೆ, ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ.