Advertisement

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ಆತ್ಮಹತ್ಯೆ

04:29 PM Jul 07, 2023 | Team Udayavani |

ವಿಟ್ಲ: ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ (41) ಎಂದು ಗುರುತಿಸಲಾಗಿದೆ.

ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಇದಕ್ಕೆ ಸ್ಥಳೀಯವಾಗಿ ಆಯುರ್ವೇದಿಕ್ ಚಿಕಿತ್ಸೆ ಮಾಡಿದರೂ ನೋವು ಕಡಿಮೆಯಾಗದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತ ಮಹಿಳೆಯ ಸಹೋದರ ನೀಡಿದ ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next