Advertisement

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಕೇಂದ್ರ ಸರ್ಕಾರಕ್ಕೆ ವಾರ್ಷಿಕ 1.4 ಲಕ್ಷ ಕೋಟಿ ರೂ. ನಷ್ಟ

10:50 AM Nov 04, 2021 | Team Udayavani |

ನವದೆಹಲಿ: ದೀಪಾವಳಿ ಹಬ್ಬದ ಕೊಡುಗೆಯಾಗಿ ಕೇಂದ್ರ ಸರ್ಕಾರ ದೇಶದ ಜನರಿಗೆ ಪೆಟ್ರೋಲ್, ಡೀಸೆಲ್ ವಿಚಾರದಲ್ಲಿ ಖುಷಿ ಸಂಗತಿಯೊಂದನ್ನು ನೀಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಮೇಲೆ 5 ರೂಪಾಯಿ ಹಾಗೂ ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕ ಕಡಿಮೆ ಮಾಡಿದೆ. ಇದರಿಂದಾಗಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 1.4 ಲಕ್ಷ ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ವರದಿ ತಿಳಿಸಿದೆ.

Advertisement

ಪೆಟ್ರೋಲ್ ಗಿಂತ ಡೀಸೆಲ್ ಅಬಕಾರಿ ಸುಂಕ ಇಳಿಕೆ ಹೆಚ್ಚಾಗಿದೆ ಎಂದು ಹೇಳಿರುವ ಕೇಂದ್ರ ಸರ್ಕಾರ ದೇಶದ ಅರ್ಥ ವ್ಯವಸ್ಥೆಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ಹಣದುಬ್ಬರ ಪ್ರಮಾಣ ಇಳಿಕೆಯಾಗಿ, ಜನರಲ್ಲಿ ಹೆಚ್ಚಿನ ಪ್ರಮಾಣದ ಖರೀದಿ ಹೆಚ್ಚಲಿದೆ. ಇದು ಮಧ್ಯಮ ಮತ್ತು ಬಡ ವರ್ಗದ ಜನರಿಗೆ ನೆರವಾಗಲಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿತ್ತು.

2020ರ ಮಾರ್ಚ್ ನಿಂದ ಮೇ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 13 ರೂಪಾಯಿ, 16 ರೂಪಾಯಿಗಳಷ್ಟು ಇಳಿಕೆ ಮಾಡಿದ ಬಳಿಕದ ಗರಿಷ್ಠ ಇಳಿಕೆ ಇದಾಗಿದೆ. 2020ರ ಮೇ 5ರ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಗೆ 38.78 ರೂಪಾಯಿ , ಪ್ರತಿ ಲೀಟರ್ ಡೀಸೆಲ್ ದರ 29.03 ರೂಪಾಯಿಗೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next