ನವದೆಹಲಿ:ದೇಶದಲ್ಲಿ ಇಂಧನ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಶನಿವಾರ (ಜೂನ್ 26) ಪೆಟ್ರೋಲ್ ಬೆಲೆ ಲೀಟರ್ ಗೆ 35 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 35 ಪೈಸೆಯಷ್ಟು ಏರಿಕೆಯಾಗಿದ್ದು, ಇದರೊಂದಿಗೆ ಬೆಂಗಳೂರು, ಮುಂಬಯಿ, ತಿರುವನಂತಪುರಂ, ಪಾಟ್ನಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ 19: ಬ್ರಿಟನ್ ನಲ್ಲಿ 35 ಸಾವಿರಕ್ಕೂ ಅಧಿಕ ಡೆಲ್ಟಾ ರೂಪಾಂತರಿತ ಪ್ರಕರಣ ಪತ್ತೆ
ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 101.39 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಲೀಟರ್ ಗೆ 93.99 ರೂಪಾಯಿಗೆ ಹೆಚ್ಚಳವಾಗಿದೆ. ಜೂನ್ 25ರಂದು ಡೀಸೆಲ್ ಬೆಲೆ ಲೀಟರ್ ಗೆ 93.61 ರೂಪಾಯಿಗೆ ಮಾರಾಟವಾಗಿತ್ತು.
ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 104.22 ರೂಪಾಯಿಗೆ ದಾಖಲೆ ಪ್ರಮಾಣದ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 96 ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 98.11 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 88.65 ರೂಪಾಯಿಗೆ ಹೆಚ್ಚಳವಾಗಿದೆ. ಮಂಗಳೂರಿನಲ್ಲಿಯೂ ಪೆಟ್ರೋಲ್ ಬೆಲೆ 100 ರೂಪಾಯಿ ದಾಟಿದ್ದು, ಇದೀಗ ಪಾಟ್ನಾ ಮತ್ತು ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ ನೂರು ರೂಪಾಯಿಗೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಕೇರಳದ ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100.09 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 95.19 ರೂಪಾಯಿಗೆ ಹೆಚ್ಚಳವಾಗಿದೆ.