ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.85ಕ್ಕೆ ಏರಿಕೆಯಾಗಿದೆ. ಡಿಸೇಲ್ ದರವೂ ಸತತವಾಗಿ ಏರಿಕೆಯಾಗಿದೆ. ತೈಲ ಮಾರಾಟ ಕಂಪೆನಿಗಳು ಹೇಳುವ ಪ್ರಕಾರ, ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 25 ಪೈಸೆ ಹೆಚ್ಚಳವಾಗಿದೆ.
ಇದನ್ನೂ ಓದಿ:ವೀರೋಚಿತ ಸರಣಿ ಗೆಲುವಿನ ಹಿಂದಿದೆ ನೋವು ಅವಮಾನ..! ಈ ಸರಣಿಯಲ್ಲಿ ಭಾರತ ಗಳಿಸಿದ್ದೇನು?
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 85.20, ಮುಂಬೈಯಲ್ಲಿ 91.80ಕ್ಕೆ ಏರಿಕೆಯಾಗಿದೆ.ಡಿಸೇಲ್ ದರ ಸತತ ಎರಡನೇ ದಿನವೂ ಏರಿಕೆಯಾಗುವುದರ ಮೂಲಕ ನವವದೆಹಲಿಯಲ್ಲಿ ಪ್ರತಿ ಲೀಟರ್ ಗೆ 75.38, ವಾಣಿಜ್ಯ ನಗರಿ ಮುಂಬೈಯಲ್ಲಿ 82.13ಕ್ಕೆ ಹೆಚ್ಚಳವಾಗಿದೆ.
ಇದನ್ನೂ ಓದಿ:ಕೋವಿಡ್ ಸೋಂಕಿಗೆ ಹೆದರಿ 3 ತಿಂಗಳು ವಿಮಾನ ನಿಲ್ದಾಣದಲ್ಲಿ ಅಡಗಿ ಕುಳಿತ ಭಾರತೀಯ ವ್ಯಕ್ತಿ!
ರಾಜ್ಯ ಒಡೆತನದ ಇಂಧನ ವ್ಯಾಪಾರಿಗಳ ದಿನದ ದರ ಸೂಚ್ಯಂಕದ ಪ್ರಕಾರ ಪೆಟ್ರೋಲ್ ಮತ್ತು ಡೀಸೇಲ್ ದರ ಪ್ರತಿ ಲೀಟರ್ ಗೆ 25 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 88.07 ರೂಪಾಯಿ, ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 82.ರೂಪಾಯಿ ಆಗಿತ್ತು.