ನವದೆಹಲಿ: ದೇಶದ ಹಲವು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಶುಕ್ರವಾರ(ಫೆ.26) ಚಳಿಗಾಲದ ಬಳಿಕ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಲಿದೆ ಎಂದು ಕೇಂದ್ರ ಇಂಧನ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಇದನ್ನೂ ಓದಿ:ಜಿಎಸ್ ಟಿ, ತೈಲ ಬೆಲೆ ಏರಿಕೆ ಖಂಡಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್, ಮಿಶ್ರ ಪ್ರತಿಕ್ರಿಯೆ
ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿರುವ ನಿಟ್ಟಿನಲ್ಲಿ ಗ್ರಾಹಕರಿಗೆ ಹೊರೆಯಾಗುತ್ತಿದೆ. ಆದರೂ ಚಳಿಗಾಲದ ನಂತರ ತೈಲ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಲಿದೆ. ಇದೊಂದು ಅಂತಾರಾಷ್ಟ್ರೀಯ ವಿಚಾರ. ತೈಲದ ಬೇಡಿಕೆ ಹೆಚ್ಚಾಗಿದ್ದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಪ್ರಧಾನ್ ಎಎನ್ ಐಗೆ ತಿಳಿಸಿದ್ದಾರೆ.
ಶುಕ್ರವಾರ ದಿಲ್ಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 90.93 ರೂಪಾಯಿ, ಡೀಸೆಲ್ ಲೀಟರ್ ಗೆ 81.31 ರೂಪಾಯಿ, ಮುಂಬೈನಲ್ಲಿ ಪೆಟ್ರೋಲ್ ಲೀಟರ್ ಗೆ 97.34 ರೂಪಾಯಿ,ಕೋಲ್ಕತಾದಲ್ಲಿ ಪೆಟ್ರೋಲ್ ಲೀಟರ್ ಬೆಲೆ 94.68 ರೂಪಾಯಿ, ಡೀಸೆಲ್ ಲೀಟರ್ ಗೆ 84.20 ರೂಪಾಯಿ, ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಗೆ 93.98 ರೂಪಾಯಿ, ಡೀಸೆಲ್ ಗೆ 86.21 ರೂಪಾಯಿಗೆ ಏರಿಕೆಯಾಗಿದೆ.
ಪೆಟ್ರೋಲ್ ಬೆಲೆ, ಜಿಎಸ್ ಟಿ ವಿರೋಧಿಸಿ ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ ಶುಕ್ರವಾರ(ಫೆ.26) ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ಸುಮಾರು 8 ಕೋಟಿ ವ್ಯಾಪಾರಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.