Advertisement

ಗುಜರಾತ್: ದೇಶ ಬಿಟ್ಟು ಪರಾರಿಯಾಗಿದ್ದ ನಿತ್ಯಾನಂದನ ಅಹಮದಾಬಾದ್ ಆಶ್ರಮ ನೆಲಸಮ

09:54 AM Dec 31, 2019 | Team Udayavani |

ಅಹಮದಾಬಾದ್:ದೇಶ ಬಿಟ್ಟು ಪರಾರಿಯಾಗಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ಹೀರಾಪುರದಲ್ಲಿರುವ ಆಶ್ರಮವನ್ನು  ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರಿದ (ಎಯುಡಿಎ) ಅಧಿಕಾರಿಗಳು ನೆಲಸಮಗೊಳಿಸಿರುವ ಘಟನೆ ನಡೆದಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

Advertisement

ಸ್ವಯಂ ಘೋಷಿತ ದೇವಮಾನ ನಿತ್ಯಾನಂದ ದೇಶ ಬಿಟ್ಟು ಪರಾರಿಯಾಗಿರುವುದಾಗಿ ಕಳೆದ ತಿಂಗಳು ಗುಜರಾತ್ ಪೊಲೀಸರು ತಿಳಿಸಿದ್ದರು. ಅಲ್ಲದೇ ಆಶ್ರಮದ ಇಬ್ಬರು ಮಹಿಳಾ ಸಿಬ್ಬಂದಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದರು.

ನಿತ್ಯಾನಂದನ ಆಶ್ರಮದಲ್ಲಿದ್ದ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಿಡಿದಿಟ್ಟುಕೊಂಡಿರುವುದಾಗಿ ಆರೋಪಿಸಿ ಬೆಂಗಳೂರಿನಲ್ಲಿ ವಾಸವಾಗಿದ್ದ ಜನಾರ್ಧನ್ ಶರ್ಮಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ನಿತ್ಯಾನಂದನ ಇಬ್ಬರು ಶಿಷ್ಯೆಯರನ್ನು ಬಂಧಿಸಿದ್ದರು ಎಂದು ವರದಿ ತಿಳಿಸಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next