Advertisement
ನಗರದ ಹೊರ ವಲಯದ ತೊರವಿ ಬಳಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ವಿಶ್ವಕ್ಕೆ ಮಾದರಿಯಾದ ಸಂವಿಧಾನ ಕೊಡುಗೆಯಾಗಿ ನೀಡಿದ ಡಾ| ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತೀಯರು ಸದಾ ಚಿರಋಣಿಯಾಗಿದ್ದೇವೆ ಎಂದರು.
Related Articles
Advertisement
ಇಂತಹ ಪ್ರಕ್ಷುಬ್ದ ಸನ್ನಿವೇಶವನ್ನು ನಮ್ಮ ಸರ್ಕಾರ ದೇಶವೇ ಮೆಚ್ಚುವಂತೆ ರಕ್ಷಣಾತ್ಮಕ ಮತ್ತು ಪರಿಣಾಮಕಾರಿಯಾಗಿ ನಿಭಾಯಿಸಿ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೆ 2.76 ಲಕ್ಷ ಜನರ ಗಂಟಲು ದ್ರವ ಮಾದರಿ ತಪಾಸಣೆ ನಡೆಸಿದ್ದು, 14,833 ಪ್ರಕರಣಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಶೇ. 98.19 ರೋಗಿಗಳು ಗುಣಮುಖರಾಗಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತದ ಪರಿಕಲ್ಪನೆಯಲ್ಲಿ ಯಶಸ್ವಿ ಸಂಶೋಧನೆ ನಡೆಸಿ, ಕೋವಿಡ್ ರೋಗಕ್ಕೆ ಕೋವ್ಯಾಕ್ಸಿನ್ ಲಸಿಕೆ ಕಂಡು ಹಿಡಿಯಲಾಗಿದೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 5676 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿಯಲ್ಲಿ 3755 ಕಾರ್ಯಕರ್ತರಿಗೆ ಲಸಿಕೆ ಹಾಕುವ ಮೂಲಕ ಶೇ. 66.15 ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.
2020ರ ವೇಳೆ ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ ಬೆಳೆ ಹಾನಿಯಾಗಿದೆ. ನಮ್ಮ ಸರ್ಕಾರ 1.59ಲಕ್ಷ ರೈತರಿಗೆ 109 ಕೋಟಿ ರೂ. ಪರಿಹಾರ ವಿತರಿಸಿದೆ ಎಂದು ವಿವರಿಸಿದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ, ಎಸ್ಪಿ ಅನುಪಮ್ ಅಗರವಾಲ, ಎಡಿಸಿ ಡಾ| ಔದ್ರಾಮ್, ಎಎಸ್ಪಿ ರಾಮ ಅರಸಿದ್ದಿ, ತಹಶೀಲ್ದಾರ್ ಮೋಹನಕುಮಾರಿ, ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ಇದ್ದರು. ಬಳಿಕ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳ 6 ತಂಡಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್‌ಪಿಐ ಶಂಕರಗೌಡ ಚೌಧರಿ ಕವಾಯತು ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಗೌರವ ವಂದನೆ ಸಲ್ಲಿಸಿದವು.