Advertisement
ನಗರದ ಅರಮನೆ ರಸ್ತೆಯಲ್ಲಿನ ಔಷಧ ನಿಯಂತ್ರಣ ಇಲಾಖೆ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆದಿರುವ ಬೆಂಗಳೂರು, “ಐಟಿ ಹಬ್’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದೇರೀತಿ ಬೆಂಗಳೂರನ್ನು “ಫಾರ್ಮಾಸುಟಿಕಲ್ ಹಬ್’ ಆಗಿ ರೂಪಿಸುವುದಾದರೆ ಅದಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
Related Articles
Advertisement
ನೂತನ ಐದು ಅಂತಸ್ತಿನ ಕಟ್ಟಡ ನಿರ್ಮಿಸುವ ಯೋಜನೆ 2010ರಲ್ಲಿ ರೂಪುಗೊಂಡಿದ್ದು, 26 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ ನಾಯಕ್, ಹೆಚ್ಚುವರಿ ಔಷಧ ನಿಯಂತ್ರಕ ಅಮರೇಶ್ ತಂಬಗಿ ಇತರರು ಉಪಸ್ಥಿತರಿದ್ದರು.
ಔಷಧದ ಹೆಸರಿನಲ್ಲಿ ಮಾದಕ ವಸ್ತು ಮಾರಾಟ ಜಾಲ “ಔಷಧ ಮಾರಾಟದ ಹೆಸರಿನಲ್ಲಿ ಮಾದಕ ವಸ್ತು ಮಾರಾಟ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದಾಗ ಅಚ್ಚರಿ ಯಾಯಿತು. ಅದರಂತೆ ಕಾರ್ಯಾಚರಣೆ ನಡೆಸಲು ಸೂಚಿಸಿದಾಗ ಮನೆಯೊಂದರಲ್ಲಿ ಮಾದಕ ವಸ್ತು ತಯಾರಿಸುತ್ತಿದ್ದುದು ಪತ್ತೆಯಾಗಿತ್ತು!’ ಎಂದು ಡಿಸಿಎಂ ಡಾ.ಪರಮೇಶ್ವರ್ ಅಚ್ಚರಿ ವ್ಯಕ್ತಪಡಿಸಿದರು.
ಮಾದಕ ವಸ್ತುಗಳು ನಗರಕ್ಕೆ ವಿದೇಶಗಳಿಂದ ಪೂರೈಕೆಯಾಗುತ್ತವೆ ಎಂದು ತಿಳಿದಿದ್ದ ನನಗೆ ಸ್ಥಳೀಯ ವಾಗೇ ತಯಾರಾಗುವ ಬಗ್ಗೆ ಗೊತ್ತಿರಲಿಲ್ಲ. ಅದರಂತೆ ಕಾರ್ಯಾಚರಣೆಗೆ ಸೂಚಿಸಿದೆ ಎಂದು ಹೇಳಿದರು.
ಕಮ್ಮನಹಳ್ಳಿಯ ಮನೆಯೊಂದರ ಮೇಲೆ ದಾಳಿ ನಡೆಸಿದಾಗ ಔಷಧ ತಯಾರಿಕೆಗೆ ಅನುಮತಿ ಪಡೆದು ಮಾದಕ ವಸ್ತು ತಯಾರಿಸುತ್ತಿದ್ದುದು ಕಂಡುಬಂತು. ಪೊಲೀಸರು ಹಾಗೂ ಸುಂಕ ಅಧಿಕಾರಿಗಳು ಇದನ್ನು ಪತ್ತೆಹಚ್ಚಿ ವಶಕ್ಕೆ ಪಡೆದರು. ಬೆಂಗಳೂರಿನ ಸುತ್ತಮುತ್ತಲ ಪ್ರದೇಶದಲ್ಲಿ ಈ ರೀತಿಯ ಕೃತ್ಯಗಳು ನಡೆಯುತ್ತಿವೆ ಎಂಬ ಮಾಹಿತಿಯಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಿಯಾಶೀಲವಾಗಿ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ. ಔಷಧ ನಿಯಂತ್ರಣ ಇಲಾಖೆಯು ತನ್ನ ವ್ಯಾಪ್ತಿಯಲ್ಲಿ ಕಾಯ್ದೆ ಪ್ರಕಾರ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.