Advertisement

ಶನಿವಾರ-ರವಿವಾರ ಮತ್ತೆ ಸಂಪೂರ್ಣ ಲಾಕ್‌ಡೌನ್‌

07:34 PM Jun 09, 2021 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಈ ವಾರಾಂತ್ಯದಲ್ಲಿಯೂ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿ ಜಿಲ್ಲಾಧಿಕಾರಿ ಡಾ| ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

Advertisement

ಶನಿವಾರ ಜೂ.12ರಂದು ಬೆಳಗ್ಗೆ 6ರಿಂದ ಜೂ.14ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದೆ. ಶನಿವಾರ, ರವಿವಾರ ಅಗತ್ಯ ಸೇವೆಗಳು ಹೊರತುಪಡಿಸಿ ಇನ್ನುಳಿದ ಎಲ್ಲ ಚಟುವಟಿಕೆಗಳಿಗೆ ನಿರ್ಬಂಧ ಇರಲಿದೆ. ಜಿಲ್ಲೆಯಾದ್ಯಂತ ಕೋವಿಡ್‌ -19 ಹರಡುವುದನ್ನು ತಡೆಗಟ್ಟಲು ವಾರಾಂತ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್‌ಲೈನ್‌ ಫುಡ್‌ ಸರ್ವಿಸಿಸ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್‌ ಘೋಷಿಸಿರುವ ದಿನಗಳಂದು ಸಾರ್ವಜನಿಕ ವಿತರಣಾ ಪದ್ಧತಿಯಡಿಯ ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕು. ಅದೇ ರೀತಿ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು, ಬೆಳಗಾವಿ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಮಾರಾಟ ಮಳಿಗೆಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶವಿರುತ್ತದೆ. ಪ್ರತಿ ಗ್ರಾಮದಿಂದ 5 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶವಿರುತ್ತದೆ. ಅಲ್ಲಿ ತೆರಳುವ ರೈತರು ಸಂಬಂಧಿ ಸಿದ ಪಿಡಿಒ ಹಾಗೂ ಗ್ರಾಮಲೆಕ್ಕಿಗರ ಅನುಮತಿ ಪಡೆಯಬೇಕು. ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಪೂರ್ಣ ಲಾಕ್‌ಡೌನ್‌ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next