ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ವಿಧಿಸಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಡಳಿತವು ಮೇ 24 ರಿಂದ 28ರ ತನಕ ಕಠಿಣ ಲಾಕ್ ಡೌನ್ ಮುಂದುವರೆಸಿದೆ. ಆದರೆ ಕಠಿಣ ನಿಯಮಗಳಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಠಾಣಾಧಿಕಾರಿ?
ಹೋಟೆಲ್, ದಿನಸಿ ಅಂಗಡಿಗೆ ಹೋಂ ಡೆಲವರಿಗೆ ಅವಕಾಶ ನೀಡಲಾಗಿದ್ದು, ತಳ್ಳುವ ಗಾಡಿಯಲ್ಲಿ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶವಿದೆ. ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬೆಳಗ್ಗೆ 6-10 ಗಂಟೆವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಚಿಕ್ಕಮಗಳೂರು ನಾಲ್ಕು ದಿನ ಲಾಕ್ ಡೌನ್ ಯಶಸ್ವಿಯಾಗಿದೆ ಇನ್ನೂ ನಾಲ್ಕು ದಿನ ಲಾಕ್ ಡೌನ್ ಮುಂದುವರೆಸಿದ್ದೇವೆ. ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.