Advertisement
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಪಾಳ್ಯ ಗ್ರಾಮದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ 39 ವರ್ಷದ ವ್ಯಕ್ತಿ ಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಧುರೆ ಹೋಬಳಿ ಕೋಡಿಪಾಳ್ಯದ 39 ವರ್ಷದ ವ್ಯಕ್ತಿಯೊಬ್ಬರಿಗೆ ಏ.13ರಂದು ಕೋವಿಡ್ ಸೋಂಕು ಇರುವುದು ದೃಢಪಟ್ಟು ದೊಡ್ಡಬಳ್ಳಾಪುರ ತಾಲೂಕಿಗೂ ಕೋವಿಡ್ ಕಾಲಿಟ್ಟಿತ್ತು. ಕೋವಿಡ್ ಸೋಂಕು ದೃಢಪಟ್ಟ ಕಾರಣ, ವ್ಯಕ್ತಿಯನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲದೆ,ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೋಡಿಪಾಳ್ಯ ಗ್ರಾಮವನ್ನು ಸೀಲ್ಡೌನ್ ಮಾಡಿ, ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ಜನರನ್ನು ಇಸ್ತೂರಿನ ಅಂಬೇಡ್ಕರ್ ವಸತಿ ನಿಲಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.