Advertisement
ದಾರ್ಶನಿಕ ಸಮೂಹದ ಚಟುವಟಿಕೆಗಳಿಗಾಗಿ ರಾಜ್ಯದ ವಿವಿಧ ಭಾಗಗಳಿಂದ 1,260 ಪ್ರಸ್ತಾವನೆಗಳು ಬಂದಿದ್ದವು. ಅವುಗಳನ್ನು ತಜ್ಞ ವಿಜ್ಞಾನಿಗಳು ಪರಿಶೀಲನೆ ನಡೆಸಿ, 143 ಯೋಜನೆಗಳನ್ನು ಅಂತಿಮಗೊಳಿಸಿದ್ದಾರೆ. ಅವುಗಳಿಗೆ ಏಳು ವಿಭಾಗಗಳಲ್ಲಿ ಧನಸಹಾಯ ನೀಡಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎಂಜಿನಿಯರಿಂಗ್ ಕಾಲೇಜುಗಳ ಬೋಧಕರಿಗೆ ತರಬೇತಿ ಕಾರ್ಯಾಗಾರಗಳಿಗೆ 30 ಲಕ್ಷ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರತಿಭಾವಂತ ಶಿಕ್ಷಕರ ಸಂಶೋಧನಾ ನಿಧಿಗೆ 1 ಕೋಟಿ, ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಸೌಕರ್ಯ ಅಭಿವೃದ್ಧಿ ನಿಧಿಗೆ 11 ಕೋಟಿ ರೂ. ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.