Advertisement

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

09:54 AM Dec 09, 2021 | Team Udayavani |

ಹೊಸದಿಲ್ಲಿ: ತಮಿಳುನಾಡಿದ ವೆಲ್ಲಿಂಗ್ಟನ್ ಬಳಿಯ ಕೂನೂರಿನಲ್ಲಿ ಬುಧವಾರ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ವರದಿ ತಿಳಿಸಿದೆ.

Advertisement

ಬುಧವಾರ ತಮಿಳುನಾಡಿನ ವೆಲ್ಲಿಂಗ್ಟನ್‌ ಬಳಿಯ ಕೂನೂರಿನಲ್ಲಿ ವಾಯುಸೇನೆಯ ಎಂ- 17ವಿ5 ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿದೆ. ದೇಶದ ಮೊಟ್ಟ ಮೊದಲ ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್‌, ಅವರ ಪತ್ನಿ ಮಧುಲಿಕಾ ರಾವತ್‌ ಸೇರಿದಂತೆ 14 ಮಂದಿ ಅದರಲ್ಲಿ ಪ್ರಯಾಣಿಸುತ್ತಿದ್ದರು. ಈ 14 ಮಂದಿಯಲ್ಲಿ ಕೇವಲ ಒಬ್ಬರು ಮಾತ್ರ ಬದುಕುಳಿದರು. ಜ.ರಾವತ್ ಸೇರಿದಂತೆ ಉಳಿದವರೆಲ್ಲರೂ ಸಾವನ್ನಪ್ಪಿದ್ದಾರೆ. ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಎಸ್‌ಸಿ ಅವರು ಮಾತ್ರ ಬದುುಕುಳಿದಿದ್ದು, ವೆಲ್ಲಿಂಗ್ಟನ್‌ನಲ್ಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನರಲ್ ರಾವತ್ ಮತ್ತು ಅವರ ಪತ್ನಿಯ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ಅವರ ಪಾರ್ಥಿವ ಶರೀರ ಇಂದು ಸಂಜೆ ಸೇನಾ ವಿಮಾನದ ಮೂಲಕ ದೆಹಲಿ ತಲುಪುವ ನಿರೀಕ್ಷೆಯಿದೆ.

ಇದನ್ನೂ ಓದಿ:ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ದುರಂತದಲ್ಲಿ ಯಾರೊಬ್ಬರ ಗುರುತು ಸಿಗಲಾರದಷ್ಟು ಶವಗಳು ಸುಟ್ಟು ಹೋಗಿವೆ. ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಮಾಡಲಾಗುತ್ತಿದೆ. ಈ ಪ್ರಕ್ರಿಯೆ ಮುಗಿದ ನಂತರ ವೆಲ್ಲಿಂಗ್ಟನ್‌ ನಲ್ಲಿರುವ ಮಿಲಿಟರಿ ನೆಲೆಗೆ ಮೃತದೇಹಗಳನ್ನು ತರಲಾಗುತ್ತದೆ. ಇಲ್ಲಿ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ವಾಯುಸೇನಾ ಮುಖ್ಯಸ್ಥ ವಿ.ಆರ್‌.ಚೌಧರಿ ಅವರು ಗೌರವ ಸಮರ್ಪಿಸಲಿದ್ದಾರೆ. ಬಳಿಕ ದೆಹಲಿಗೆ ತೆಗೆದುಕೊಂಡು ಹೋಗಲಾಗುತ್ತದೆ.

Advertisement

ಘಟನೆ ಬಗ್ಗೆ ತನಿಖೆಗೆ ಆದೇಶ: ಸೂಲೂರಿನಿಂದ ಬೆಳಗ್ಗೆ 10.30ಕ್ಕೆ ಹೊರಟಿದ್ದ ಎಂ 17ವಿ5 ಹೆಲಿಕಾಪ್ಟರ್‌ 12.45ರ ವೇಳೆಗೆ ವೆಲ್ಲಿಂಗ್ಟನ್‌ ತಲುಪಬೇಕಿತ್ತು. ಅಪಘಾತವಾದ ತಕ್ಷಣ ಸ್ಥಳೀಯರೇ ಬೆಂಕಿ ಆರಿಸಲು ಯತ್ನಿಸಿದರು. ಬಳಿಕ ಹತ್ತಿರದ ಅಗ್ನಿಶಾಮಕ ದಳ ಮತ್ತು ವಾಯುಸೇನಾ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದರು. ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಭಾರತೀಯ ವಾಯುಸೇನೆ, ಅಪಘಾತದ ಕುರಿತು ತನಿಖೆಗೆ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next